RCB ಅಭಿಮಾನಿಗಳಿಗೆ ಡಿಸಿಎಂ ಗುಡ್​ನ್ಯೂಸ್​: ಬೆಂಗಳೂರಿನಲ್ಲೇ ಪಂದ್ಯ ಆಯೋಜನೆ ಬಗ್ಗೆ ಮಹತ್ವದ ಮಾಹಿತಿ ನೀಡಿದ DK ಶಿವಕುಮಾರ್​

DK Shivakumar
DK Shivakumar
Published on
ಬೆಳಗಾವಿ: "ಬೆಂಗಳೂರಿನ ಗೌರವ ಉಳಿಸಲು ನಾವು ಅಗತ್ಯ ಕ್ರಮ ಕೈಗೊಂಡಿದ್ದೇವೆ. ಮುಂದೆ ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದೇವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. "ಈ ವಿಚಾರದಲ್ಲಿ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಜವಾಬ್ದಾರಿಯನ್ನು ಗೃಹ ಸಚಿವ ಪರಮೇಶ್ವರ್ ಅವರಿಗೆ ವಹಿಸಲಾಗಿದೆ. ಕೆಎಸ್ ಸಿಎ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಅವರ ತಂಡ ಹಾಗೂ ಪೊಲೀಸ್ ಅಧಿಕಾರಿಗಳು ಕೂತು ಚರ್ಚೆ ಮಾಡಲಿದ್ದಾರೆ" ಎಂದು ತಿಳಿಸಿದರು.
ಯಾವ ಔತಣಕೂಟವೂ ಇಲ್ಲ, ಏನೂ ಇಲ್ಲ
ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಊಟವನ್ನು ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು ಯಾವ ಔತಣಕೂಟವೂ ಅಲ್ಲ, ಏನೂ ಅಲ್ಲ" ಎಂದು ಅವರು ಹೇಳಿದ್ದಾರೆ.
ಬೆಳಗಾವಿ ಹೊರವಲಯದಲ್ಲಿ ನಿನ್ನೆ ರಾತ್ರಿ ಶಾಸಕರ ಜತೆ ಔತಣಕೂಟ ಮಾಡಿದ್ದೀರಂತಲ್ಲಾ ಎಂಬ ಪ್ರಶ್ನೆಗೆ, "ನನ್ನ ಕ್ಷೇತ್ರದ ಹುಡುಗನೊಬ್ಬ ಇಲ್ಲಿ ಕೆಲಸ ಮಾಡುತ್ತಿದ್ದಾನೆ. ಆತನ ಮನೆಯಿಂದ ಇವತ್ತು ಮುದ್ದೆ, ಉಪ್ಸಾರು ಊಟ ಮಾಡಿ ಕಳಿಸುತ್ತೇವೆ ಎನ್ನುತ್ತಿದ್ದಾನೆ. ಹೀಗೇ ಅವರು ಪ್ರೀತಿಯಿಂದ ಹೇಳಿದಾಗ, ಕರೆದಾಗ ಬೇಡ ಎನ್ನಲು ಆಗುತ್ತದೆಯೇ? ನಾಳಿದ್ದು ನಮ್ಮ ಆಸೀಫ್ ಸೇಠ್, ಫಿರೋಜ್ ಸೇಠ್ ಅವರು ಊಟಕ್ಕೆ ಕರೆದಿದ್ದಾರೆ" ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net