ರಾಜಕೀಯ ಬೆಂಬಲಕ್ಕೆ ಕೆ.ಎನ್. ರಾಜಣ್ಣ ಹಾಗೂ ನೀವು ಭೇಟಿ ಮಾಡಿದ್ದೀರಿ ಎಂದಾಗ, "ನಾವು ಸಹೋದ್ಯೋಗಿಗಳು. ಅವರು ನಮ್ಮ ಜತೆ ಕೆಲಸ ಮಾಡಿರುವವರು. ನನಗೆ ಯಾರ ಜತೆಯೂ ಭಿನ್ನಾಭಿಪ್ರಾಯಗಳಿಲ್ಲ. ಕಳೆದ 16 ವರ್ಷಗಳಿಂದ, ಅವರು ನಮ್ಮ ಪಕ್ಷಕ್ಕೆ ಬಂದ ದಿನದಿಂದ ನನಗೂ ಮುಖ್ಯಮಂತ್ರಿಯವರಿಗೂ ಬಿನ್ನಾಭಿಪ್ರಾಯಗಳು ಏನಾದರೂ ಇದೆಯಾ? ಭಿನ್ನಾಭಿಪ್ರಾಯಗಳನ್ನು ಮಾಧ್ಯಮಗಳು, ವಿರೋಧ ಪಕ್ಷಗಳು ಸೃಷ್ಟಿ ಮಾಡುತ್ತಿವೆ. ತಮಗೆ ಬೇಕಾದ ಆಹಾರ ಸೃಷ್ಟಿಸುತ್ತಿದ್ದಾರೆ