ಮೇ 12ರಂದು ಚೇಳೂರು ವೃತ್ತದ ಬಳಿ ನಡೆದುಕೊಂಡು ಹೋಗುತ್ತಿದ್ದ ರವಿಗೆ ವೇಗವಾಗಿ ಬಂದ ಆಟೋ ಡಿಕ್ಕಿ ಹೊಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಸ್ಥಳಿಯವಾಗಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತೆಗೆ ದಾಖಲು ಮಾಡಲಾಗಿತ್ತು. ಶನಿವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮರಣೋತ್ತರ ಪರೀೆ ನಡೆಸಿ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಚಿಂತಾಮಣಿ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.