ಅರ್ಥಪೂರ್ಣ ಸ್ವಾತಂತ್ರೃ ದಿನಾಚರಣೆಗೆ ನಿರ್ಧಾರ

ಎಚ್.ಡಿ. ಕೋಟೆ ಪಟ್ಟಣದ ತಾಲೂಕು ಆಡಳಿತ ಕಚೇರಿಯ ಮಹಾತ್ಮಗಾಂಧಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಶ್ರೀನಿವಾಸ್ ಮಾತನಾಡಿದರು.  ಸಿ.ಎನ್.ರಾಜು, ಗಂಗಾಧರ್, ಡಾ.ಟಿ. ರವಿಕುಮಾರ್ ಇತರರಿದ್ದರು.
ಎಚ್.ಡಿ. ಕೋಟೆ ಪಟ್ಟಣದ ತಾಲೂಕು ಆಡಳಿತ ಕಚೇರಿಯ ಮಹಾತ್ಮಗಾಂಧಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಶ್ರೀನಿವಾಸ್ ಮಾತನಾಡಿದರು. ಸಿ.ಎನ್.ರಾಜು, ಗಂಗಾಧರ್, ಡಾ.ಟಿ. ರವಿಕುಮಾರ್ ಇತರರಿದ್ದರು.
Published on

ಎಚ್.ಡಿ.ಕೋಟೆ:

ಆಗಸ್ಟ್ 15 ರಂದು ಪಟ್ಟಣದಲ್ಲಿ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಿದ್ದು, ಸಾರ್ವಜನಿಕರು ಮತ್ತು ಅಧಿಕಾರಿ ವರ್ಗ ಸಹಕಾರ ನೀಡಬೇಕು ಎಂದು ತಹಸೀಲ್ದಾರ್ ಶ್ರೀನಿವಾಸ್ ಕೋರಿದರು.

ಸ್ವಾತಂತ್ರ ದಿನಾಚರಣೆ ಸಂಬಂಧ ಪಟ್ಟಣದ ತಾಲೂಕು ಆಡಳಿತ ಸಹೋದರ ಮಹಾತ್ಮಗಾಂಧಿ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಆ.15ರಂದು ಪಟ್ಟಣದ ಜೂನಿಯರ್ ಕಾಲೇಜು ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಶಾಸಕ ಅನಿಲ್‌ಚಿಕ್ಕಮಾದು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದರು.
ಕಾರ್ಯಕ್ರಮದ ದಿನ ಬೆಳಗ್ಗೆ 8 ಗಂಟೆಗೆ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದು, ಇಲಾಖೆಯ ಅಧಿಕಾರಿಗಳು ತಪ್ಪದೆ ಭಾಗವಹಿಸಲು ತಿಳಿಸಿದರು. ನಂತರ ಒಂಬತ್ತು ಗಂಟೆಗೆ ಕಾಲೇಜು ಮೈದಾನದಲ್ಲಿ ಶಾಸಕರು ಪೊಲೀಸ್ ಧ್ವಜವಂದನೆ ಸ್ವೀಕರಿಸಿದ ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ಶಾಲಾ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದು, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದರ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳಬೇಕು. ಕಾರ್ಯಕ್ರಮಕ್ಕೆ ಬರುವ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಉಪಾಹಾರದ ವ್ಯವಸ್ಥೆ ಮಾಡಬೇಕು, ಇಲಾಖೆ ಅಧಿಕಾರಿಗಳು ಕಾರ್ಯಕ್ರಮಕ್ಕೆ ಯಾವುದೇ ತೊಂದರೆ ಆಗದಂತೆ ನಿರ್ವಹಿಸಬೇಕು ಎಂದರು.
ವೇದಿಕೆಗೆ ಆಹ್ವಾನಿತರನ್ನು ಮಾತ್ರ ಕೂರಿಸಬೇಕು. ವೇದಿಕೆ ಕಾರ್ಯಕ್ರಮ ಶಿಸ್ತುಬದ್ಧವಾಗಿ ನಡೆಯಬೇಕು. ಕಾರ್ಯಕ್ರಮದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ಗೌರವಿಸುವ ಕೆಲಸ ಆಗಬೇಕು. ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಹಸೀಲ್ದಾರ್ ಸೂಚನೆ ನೀಡಬೇಕು. ಒಟ್ಟಾರೆಯಾಗಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು ಎಂದು ಸಲಹೆ ನೀಡಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಚಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು, ಪೊಲೀಸ್ ಇನ್‌ಸ್ಪೆಕ್ಟರ್ ಗಂಗಾಧರ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಟಿ. ರವಿಕುಮಾರ್, ಪುರಸಭಾ ಮುಖ್ಯಾಧಿಕಾರಿ ಪಿ. ಸುರೇಶ್, ಮುಖಂಡರಾದ ಜೀವಿಕ ಬಸವರಾಜು, ಸರಗೂರು ಕೃಷ್ಣ, ಮಟಕೆರೆ ಮಹೇಶ್, ಹೈರಿಗೆ ಕುಮಾರ್, ಅನಿಲ್ ಸಿಂಗ್, ತಾಲೂಕು ಮಟ್ಟದ ಅಧಿಕಾರಿಗಳಾದ ದೀಪಾ, ಶಶಿಕಲಾ, ವರ್ಷಿತಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net