ಬರಪೀಡಿತ ಪ್ರದೇಶವೆಂದು ಘೋಷಿಸಿ

ಸಿಂಧನೂರಿನಲ್ಲಿ ತಹಸಿಲ್ ಕಚೇರಿ ಶಿರಸ್ತೇದಾರ್ ವೀಣಾಶ್ರೀಗೆ ಕರ್ನಾಟಕ ರೈತ ಸಂಘ ಬುಧವಾರ ಮನವಿ ಸಲ್ಲಿಸಿತು. ತಾಲೂಕು ಅಧ್ಯಕ್ಷ ರಮೇಶ ಪಾಟೀಲ್ ಬೇರ‌್ಗಿ, ಸಿಪಿಐ(ಎಂಎಲ್) ಮಾಸ್‌ಲೈನ್ ಜಿಲ್ಲಾ ಕಾರ್ಯದರ್ಶಿ ಬಿ.ಎನ್.ಯರದಿಹಾಳ, ಗಂಗರಾಜ ಭೀಮರಾಜ ಕ್ಯಾಂಪ್, ನಿಂಗಪ್ಪ ಚಿಕ್ಕಬೇರ‌್ಗಿ ಇದ್ದರು.
ಸಿಂಧನೂರಿನಲ್ಲಿ ತಹಸಿಲ್ ಕಚೇರಿ ಶಿರಸ್ತೇದಾರ್ ವೀಣಾಶ್ರೀಗೆ ಕರ್ನಾಟಕ ರೈತ ಸಂಘ ಬುಧವಾರ ಮನವಿ ಸಲ್ಲಿಸಿತು. ತಾಲೂಕು ಅಧ್ಯಕ್ಷ ರಮೇಶ ಪಾಟೀಲ್ ಬೇರ‌್ಗಿ, ಸಿಪಿಐ(ಎಂಎಲ್) ಮಾಸ್‌ಲೈನ್ ಜಿಲ್ಲಾ ಕಾರ್ಯದರ್ಶಿ ಬಿ.ಎನ್.ಯರದಿಹಾಳ, ಗಂಗರಾಜ ಭೀಮರಾಜ ಕ್ಯಾಂಪ್, ನಿಂಗಪ್ಪ ಚಿಕ್ಕಬೇರ‌್ಗಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಿಂಧನೂರಿನಲ್ಲಿ ಶಿರಸ್ತೇದಾರ್‌ಗೆ ಕರ್ನಾಟಕ ರೈತ ಸಂಘ ಮನವಿ
ಸಿಂಧನೂರು: ರಾಯಚೂರು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರೈತ ಸಂಘದಿಂದ ಬುಧವಾರ ತಹಸಿಲ್ ಕಚೇರಿ ಶಿರಸ್ತೇದಾರ್ ವೀಣಾಶ್ರೀಗೆ ಮನವಿ ಸಲ್ಲಿಸಲಾಯಿತು.
ಪ್ರಸ್ತುತ ಮುಂಗಾರು ಮಳೆ ಸಂಪೂರ್ಣ ವಿಫಲವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆ ಬಾರದ ಕಾರಣ ಕೃಷಿ ಚಟುವಟಿಕೆ ನಿಂತಿವೆ. ರೈತರು, ಕಾರ್ಮಿಕರು ಹಾಗೂ ದುಡಿಯುವ ವರ್ಗ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದಾರೆ. 
ಹೀಗಾಗಿ ಸರ್ಕಾರವು ರಾಜ್ಯದ ಎಲ್ಲ ಜಿಲ್ಲೆಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಬೇಕು. ವಿದ್ಯುತ್ ಸರಬರಾಜನ್ನು ಟಾಟಾ ಪವರ್ ಕಂಪನಿಗೆ ಗುತ್ತಿಗೆ ನೀಡುವುದನ್ನು ಕೈಬಿಡಬೇಕು ಎಂದು ಆಗ್ರಹಿಸಲಾಯಿತು. 
ಜೆಜೆಎಂ ಯೋಜನೆಯಲ್ಲಿ ನಡೆದಿರುವ ಭ್ರಷ್ಟಾಚಾರದ ತನಿಖೆ ನಡೆಸಬೇಕು. ಐದು ಎಕರೆಗಿಂತ ಕಡಿಮೆ ಇರುವ ಸಣ್ಣ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು. ಕೃಷಿಗಾಗಿ ಸ್ಥಳೀಯ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಮಾಡಿರುವ ರೈತರ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿದರು.
 ಪ್ರಮುಖರಾದ ಬಾಲಾಜಿ ಉದ್ಬಾಳ, ಬಸಪ್ಪ ಕಡಬೂರು, ಯಮನೂರಪ್ಪ ರತ್ನಾಪುರಹಟ್ಟಿ, ಅಸ್ಲಂ, ಕಾಸೀಂ ಸಾಬ್, ಮರಿಯಪ್ಪ ನಾಯಕ ಬೇರ‌್ಗಿ, ಕರಿಯಪ್ಪ ತುರ್ವಿಹಾಳ, ನಿಂಗಪ್ಪ ಕೆ., ಲಾಲ್‌ಸಾಬ್ ಜಿಲೇಬಿ, ಮಹ್ಮದ್ ಅಲಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net