ಯಾದಗಿರಿ ಬರಪೀಡಿತ ಜಿಲ್ಲೆ ಘೋಷಿಸಿ

ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಸುಪುರದಲ್ಲಿ ರಾಜ್ಯ ರೈತ ಸಂಘ-ಹಸಿರು ಸೇನೆ ತಾಲೂಕು ಘಟಕದ ಪದಾಽಕಾರಿಗಳು ಪ್ರತಿಭಟನೆ ನಡೆಸಿ, ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು. ಅಯ್ಯಣ್ಣ ಹಾಲಭಾವಿ, ಹಣಮಂತ್ರಾಯ ಚಂದಲಾಪುರ, ತಿಪ್ಪಣ್ಣಾ ಜಂಪಾ, ವೆಂಕಟೇಶ ಕುಪಗಲ್, ತಿರುಪತಿ ಕುಪಗಲ್, ಹನುಮಗೌಡ ನಾರಾಯಣಪುರ, ಮಲ್ಲಣ್ಣ ಹಾಲಭಾವಿ, ಸಾಹೇಬಗೌಡ ಮದಲಿಂಗನಾಳ ಇತರರಿದ್ದರು.
ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಸುಪುರದಲ್ಲಿ ರಾಜ್ಯ ರೈತ ಸಂಘ-ಹಸಿರು ಸೇನೆ ತಾಲೂಕು ಘಟಕದ ಪದಾಽಕಾರಿಗಳು ಪ್ರತಿಭಟನೆ ನಡೆಸಿ, ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು. ಅಯ್ಯಣ್ಣ ಹಾಲಭಾವಿ, ಹಣಮಂತ್ರಾಯ ಚಂದಲಾಪುರ, ತಿಪ್ಪಣ್ಣಾ ಜಂಪಾ, ವೆಂಕಟೇಶ ಕುಪಗಲ್, ತಿರುಪತಿ ಕುಪಗಲ್, ಹನುಮಗೌಡ ನಾರಾಯಣಪುರ, ಮಲ್ಲಣ್ಣ ಹಾಲಭಾವಿ, ಸಾಹೇಬಗೌಡ ಮದಲಿಂಗನಾಳ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ರೈತ ಸಂಘ-ಹಸಿರು ಸೇನೆ ಆಗ್ರಹ
  • ಸುರಪುರ ಗಾಂಽ ಪ್ರತಿಮೆ ಎದುರು ಪ್ರತಿಭಟನೆ
ಸುರಪುರ : ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಮತ್ತು ತಾಲೂಕು ಸಮಿತಿ ಕಾರ್ಯಕರ್ತರು ಆಗ್ರಹಿಸಿದರು.
ಈ ಕುರಿತು ಪಟ್ಟಣದ ಗಾಂಽ ಪ್ರತಿಮೆ ಎದುರು ಗುರುವಾರ ಪ್ರತಿಭಟನೆ ನಡೆಸಿದ ಅವರು, ಜಿಲ್ಲೆಯಲ್ಲಿ ಮುಂಗಾರು ಮಳೆ ಇಲ್ಲದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಹೀಗಾಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಸಂಘದ ಮುಖಂಡರು ಮಾತನಾಡಿ, ಕಳೆದ ಮೂರು ತಿಂಗಳಿAದ ಮಳೆಯಾಗದ ಕಾರಣ ಬಿತ್ತನೆ ಮಾಡಿದ ಬೆಳೆ ಸಂಪೂರ್ಣ ಒಣಗಿವೆ. ಹಲವು ವರ್ಷಗಳಿಂದ ಅತಿವೃಷ್ಟಿಯಿಂದ ಸಂಕಟ ಅನುಭವಿಸಿದ್ದ ರೈತರು, ಈ ಬಾರಿ ಅನಾವೃಷ್ಟಿಯಿಂದ ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಸಮಸ್ಯೆಗಳ ಬಗ್ಗೆ ಜನಪ್ರತಿನಿಽಗಳು ಮತ್ತು ಅಽಕಾರಿಗಳು ನಿರ್ಲಕ್ಷ÷್ಯ ತೋರುತ್ತಿದ್ದಾರೆ ಎಂದು ಆರೋಪಿಸಿದರು.
ಬರದ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ವಿದ್ಯುತ್ ಹಾಗೂ ಮೂಲಸೌಕರ್ಯ ಕೊರತೆ ಹೆಚ್ಚಾಗಿದೆ. ಅನೇಕ ಗ್ರಾಮಗಳಲ್ಲಿ ವಿದ್ಯುತ್ ಪರಿವರ್ತಕ ಕೆಟ್ಟು ವಿದ್ಯುತ್ ವ್ಯತ್ಯಯವಾಗಿದ್ದು, ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯ ಅನುದಾನ ಇಲ್ಲದ ಕಾರಣ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಿದರು.
ಪ್ರತಿ ಎಕರೆಗೆ ೫೦ ಸಾವಿರ ರೂ. ಬೆಳೆ ಪರಿಹಾರ ನೀಡಬೇಕು. ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಎಂಆರ್‌ಪಿ ದರದಲ್ಲಿ ಒದಗಿಸಬೇಕು. ವಿದ್ಯುತ್ ಸಂಪರ್ಕದ ಖಾಸಗೀಕರಣ ನಿರ್ಧಾರ ಕೈಬಿಟ್ಟು ಮೊದಲಿ ವ್ಯವಸ್ಥೆ ಮುಂದುವರಿಸಬೇಕು. ರೈತರ ಸಾಲಮನ್ನಾ ಮಾಡಿ ಹೊಸ ಸಾಲ ನೀಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ನಾರಾಯಣಪುರ ಜಲಾಶಯದ ಮೂಲಕ ಕಾಲುವೆಗೆ ನೀರು ಹರಿಸಿ ಮುಂಗಾರು ಬೆಳೆಗಳಿಗೆ ನೆರವಾಗಬೇಕು ಮತ್ತು ದನ, ಕರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.
ಈ ಕುರಿತು ಮುಖ್ಯಮಂತ್ರಿಗೆ ಬರೆದ ಮನವಿಪತ್ರವನ್ನು ತಹಸೀಲ್ದಾರ್ ಮೂಲಕ ಸಲ್ಲಿಸಲಾಯಿತು.
ರೈತ ಸಂಘದ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಭಾವಿ, ಉಪಾಧ್ಯಕ್ಷ ಹಣಮಂತ್ರಾಯ ಚಂದಲಾಪುರ, ತಿಪ್ಪಣ್ಣಾ ಜಂಪಾ, ತಾಲೂಕು ಕಾರ್ಯದರ್ಶಿ ವೆಂಕಟೇಶ ಕುಪಗಲ್, ತಿರುಪತಿ ಕುಪಗಲ್, ಹನುಮಗೌಡ ನಾರಾಯಣಪುರ, ಮಲ್ಲಣ್ಣ ಹಾಲಭಾವಿ, ಸಾಹೇಬಗೌಡ ಮದಲಿಂಗನಾಳ, ಗದ್ದೆಪ್ಪ ನಾಗಬೇವಿನಾಳ, ಭೀಮಣ್ಣ ತಿಪ್ಪನಟಗಿ, ಭೀಮನಗೌಡ ಕರ್ನಾಳ, ರಾಘು ಕುಪಗಲ್, ನಾಗಪ್ಪ ಕುಪಗಲ್, ಶಿವನಗೌಡ ರುಕ್ಮಾಪುರ, ಮೌನೇಶ ಅರಳಹಳ್ಳಿ, ಪ್ರಭು ದೊರೆ, ನಿಂಗನಗೌಡ ಗುಳಬಾಳ, ಮೋದಿನ್ ಬೇವಿನಾಳ, ತಿಪ್ಪಣ್ಣ ತಳವಾರ, ಭೀಮರಾಯ ಒಕ್ಕಲಿಗ, ಖುದಾಭಕ್ಷ ಸೇರಿ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net