ಬರಪೀಡಿತ ಜಿಲ್ಲೆಯಾಗಿ ಘೋಷಿಸಿ / DEVANAHALLI

ದೇವನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಎನ್​.ವೀರಣ್ಣ, ತಾಲೂಕು ಅಧ್ಯಕ್ಷ ಎಂ.ವೆಂಕಟರಾಜು, ಗೌರವಾಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷ ಮುನಿರಾಜು, ಪ್ರಧಾನ ಕಾರ್ಯದರ್ಶಿ ಮಂಜುನಾಥ, ಪದಾಧಿಕಾರಿಗಳಾದ ಕೆ.ಸಿ.ನಂಜೇಗೌಡ, ಗೋವಿಂದರಾಜು, ವಿ.ಗೋಪಾಲಕೃಷ್ಣ, ಮುನಿವೆಂಕಟಪ್ಪ, ಎಂ.ಕೃಷ್ಣಪ್ಪ ಇತರರಿದ್ದರು.
ದೇವನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಎನ್​.ವೀರಣ್ಣ, ತಾಲೂಕು ಅಧ್ಯಕ್ಷ ಎಂ.ವೆಂಕಟರಾಜು, ಗೌರವಾಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷ ಮುನಿರಾಜು, ಪ್ರಧಾನ ಕಾರ್ಯದರ್ಶಿ ಮಂಜುನಾಥ, ಪದಾಧಿಕಾರಿಗಳಾದ ಕೆ.ಸಿ.ನಂಜೇಗೌಡ, ಗೋವಿಂದರಾಜು, ವಿ.ಗೋಪಾಲಕೃಷ್ಣ, ಮುನಿವೆಂಕಟಪ್ಪ, ಎಂ.ಕೃಷ್ಣಪ್ಪ ಇತರರಿದ್ದರು.
Published on
ದೇವನಹಳ್ಳಿ : ಮಳೆ ಇಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಹಕಾರ ಸಂಘ, ಬ್ಯಾಂಕ್​ಗಳಲ್ಲಿನ ಬೆಳೆಸಾಲವನ್ನು ಸರ್ಕಾರ ಕೂಡಲೇ ಮನ್ನಾ ಮಾಡಬೇಕು. ಹಾಗೆಯೇ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಎನ್​.ವೀರಣ್ಣ ಒತ್ತಾಯಿಸಿದರು.
ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಬಗರ್​ಹುಕುಂ ಅರ್ಜಿದಾರರಿಗೆ ಭೂಮಿ ಮಂಜೂರು ಮಾಡದೇ ಮಹಾನಗರ 18 ಕೀ.ಮೀ, ನಗರ ಪಾಲಿಕೆ 10 ಕಿ.ಮೀ, ಪುರಸಭೆ 5 ಕಿ.ಮೀ.ವರೆಗೆ ವಿಸ್ತರಿಸಿ ಸರ್ಕಾರ ಆದೇಶಿಸಿದ್ದು, ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಕೂಡಲೇ ಆದೇಶ ರದ್ದುಪಡಿಸಿ, ರೈತರಿಗೆ ಸಾಗುವಳಿ ಚೀಟಿ ನೀಡಬೇಕು ಎಂದು ಒತ್ತಾಯಿಸಿದರು.
ಬೆಂಬಲ ಬೆಲೆ ಕೊಡುವುದಾಗಿ ರೈತರಿಂದ ಸರ್ಕಾರ ರಾಗಿ ಖರೀದಿಸಿದ್ದು, ಇನ್ನೂ ಹಣ ಪಾವತಿಸಿಲ್ಲ. ಕೆಲವರಿಂದ ರಾಗಿಯನ್ನು ಖರೀದಿಸಿಯೇ ಇಲ್ಲ, ಈ ರಾಗಿ ಹಾಗೆ ಉಳಿದಿದೆ. ಜಿಲ್ಲಾಡಳಿತ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ತಾಲೂಕಿನಲ್ಲಿ ಕುಡಿಯುವ ನೀರು ಹಾಗೂ ರಸ್ತೆಗಳು ಹಾಳಾಗಿದ್ದು, ದುರಸ್ತಿ ಮಾಡಬೇಕು. ಅಲ್ಲದೇ ಖಾತೆ ಮತ್ತು ಪೌತಿ ಅದಾಲತ್​ ಹಮ್ಮಿಕೊಂಡು ರೈತರಿಗೆ ಅನುಕೂಲ ಕಲ್ಪಿಸಬೇಕು. ಈ ಬಗ್ಗೆ ಈಗಾಗಲೇ ಮನವಿ ಸಲ್ಲಿಸಿ, ಒಂದು ತಿಂಗಳು ಕಾಲಾವಕಾಶ ಕೊಟ್ಟಿದ್ದು, ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸಲು ತೀಮಾರ್ನಿಸಲಾಗಿದೆ ಎಂದು ವೀರಣ್ಣ ತಿಳಿಸಿದರು.
ತಾಲೂಕು ಅಧ್ಯಕ್ಷ ಎಂ.ವೆಂಕಟರಾಜು ಮಾತನಾಡಿ, ವಿದ್ಯುಚ್ಛಕ್ತಿ ಮಂಡಳಿ ಖಾಸಗೀಕರಣಗೊಳಿಸುವುದು ಖಂಡನೀಯ. ರೈತರ ಪಂಪ್​ಸೆಟ್​ಗಳಿಗೆ 7 ಗಂಟೆ ವಿದ್ಯುತ್​ ನೀಡುತ್ತೇವೆ ಎಂದು ಹೇಳಿದ ಸರ್ಕಾರ ಈಗ ನಿರಂತರ ಲೋಡ್​ ಶೆಡ್ಡಿಂಗ್​ ಹೇರುತ್ತಿದೆ. ಇದರಿಂದ ಬೆಳೆಗಳು ಒಣಗುತ್ತಿವೆ. ಸರ್ಕಾರಕ್ಕೆ ಗ್ಯಾರಂಟಿಗಳ ಮೇಲೆ ಇರುವ ಆಸಕ್ತಿ ರೈತರ ಮೇಲೆ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net