ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ

ಲೋಕಾಪುರ ಪಟ್ಟಣದ ನಾಡಕಚೇರಿಯಲ್ಲಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿ ರೈತ ಮುಖಂಡರು ಉಪತಹಸೀಲ್ದಾರ್ ಬಿ.ಎಸ್. ರಂಗಣ್ಣವರ ಅವರಿಗೆ ಮನವಿ ಸಲ್ಲಿಸಿದರು. ರೈತ ಮುಖಂಡ ಲೋಕಣ್ಣ ಉಳ್ಳಾಗಡ್ಡಿ, ಬಾಳಪ್ಪ ಜೋಗಿ, ಹುಸೇನಸಾಬ ಮುಲ್ಲಾ, ನೂರಸಾಬ ತಾಂಬೋಳಿ, ಬಸಯ್ಯ ಮಠಪತಿ ಇತರರಿದ್ದರು.
ಲೋಕಾಪುರ ಪಟ್ಟಣದ ನಾಡಕಚೇರಿಯಲ್ಲಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿ ರೈತ ಮುಖಂಡರು ಉಪತಹಸೀಲ್ದಾರ್ ಬಿ.ಎಸ್. ರಂಗಣ್ಣವರ ಅವರಿಗೆ ಮನವಿ ಸಲ್ಲಿಸಿದರು. ರೈತ ಮುಖಂಡ ಲೋಕಣ್ಣ ಉಳ್ಳಾಗಡ್ಡಿ, ಬಾಳಪ್ಪ ಜೋಗಿ, ಹುಸೇನಸಾಬ ಮುಲ್ಲಾ, ನೂರಸಾಬ ತಾಂಬೋಳಿ, ಬಸಯ್ಯ ಮಠಪತಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಉಪತಹಸೀಲ್ದಾರ್ ಬಿ.ಎಸ್. ರಂಗಣ್ಣವರ ಅವರಿಗೆ ಮನವಿ
  • ರೈತರ ಆಗ್ರಹ

ಲೋಕಾಪುರ: ಬಾಗಲಕೋಟೆ ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿದ್ದು, ರೈತರ ಸಾಲ ಸಂಪೂರ್ಣ ಮನ್ನಾ ಮಾಡುವುದರ ಜೊತೆಗೆ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿ ರೈತ ಮುಖಂಡರು ಪಟ್ಟಣದ ನಾಡಕಚೇರಿಯಲ್ಲಿ ಉಪತಹಸೀಲ್ದಾರ್ ಬಿ.ಎಸ್. ರಂಗಣ್ಣವರ ಅವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಹಾಗೂ ರೈತ ಮುಖಂಡ ಲೋಕಣ್ಣ ಉಳ್ಳಾಗಡ್ಡಿ ಮಾತನಾಡಿ, ಬರದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ರಾಷ್ಟ್ರೀಕತ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿನ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪ್ರತಿ ಹೆಕ್ಟೇರ್‌ಗೆ 50 ಸಾವಿರ ರೂ. ಪರಿಹಾರ ನೀಡಬೇಕು. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ನೆರವಾಗಿರುವ ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿ ಯೋಜನೆಗಳಿಗೆ ಮೀಟರ್ ಅಳವಡಿಸುವ ಕ್ರಮವನ್ನು ಕೈಬಿಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ರೈತರ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸದಿದ್ದರೆ ಕರ್ನಾಟಕ ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ನೇತತ್ವದಲ್ಲಿ ರೈತರು ಬಹತ್ ಪಾದಯಾತ್ರೆ ಮೂಲಕ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.
ರೈತ ಮುಖಂಡರಾದ ಬಾಳಪ್ಪ ಜೋಗಿ, ಹುಸೇನಸಾಬ ಮುಲ್ಲಾ, ನೂರಸಾಬ ತಾಂಬೋಳಿ, ಬಸಯ್ಯ ಮಠಪತಿ, ಮಂಜುನಾಥ ಗದಿಗೆನ್ನವರ, ಹನುಮಂತ ದುರ್ಗನ್ನವರ, ಯಮನಪ್ಪ ಕಾಳಮ್ಮನವರ, ಗೋಡಚಯ್ಯ ಗಣಾಚಾರಿ, ಮಾಳಪ್ಪ ಕಿಲಾರಿ, ಕಾಂತು ಗೌಡರ ಸೇರಿ ರೈತರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net