ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಆಯ್ಕೆ: ವೇಳಾಪಟ್ಟಿ ಪ್ರಕಟ

ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಆಯ್ಕೆ
ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಆಯ್ಕೆ
Published on

ಪ್ರಮುಖ ಮುಖ್ಯಾಂಶಗಳು

  • ಅಭ್ಯರ್ಥಿಗಳು ಜೂ.21ರಿಂದ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ
  • ಹುದ್ದೆಗಳಿಗೆ (ಗ್ರಂಥಪಾಲಕರು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು ಸೇರಿ) ಜೂ.27ರೊಳಗೆ ಅರ್ಜಿ ಸಲ್ಲಿಸಬಹುದು
  • ಮೆರಿಟ್ ಪಟ್ಟಿಯ ಆಧಾರದ ಮೇಲೆ ಕಾಲೇಜು ಆಯ್ಕೆಗಾಗಿ ಜು.7 ರಿಂದ ಆನ್‌ಲೈನ್ ಕೌನ್ಸೆಲಿಂಗ್ ನಡೆಸಲಾಗುವುದು
ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ 2026-27ನೇ ಸಾಲಿನಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ಭರ್ತಿ ಮಾಡುವುದಕ್ಕಾಗಿ ಆಯ್ಕೆ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಕಾಲೇಜು ಶಿಕ್ಷಣ ಇಲಾಖೆಯು ಪ್ರಕಟಿಸಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜೂ.21ರಿಂದ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅತಿಥಿ ಉಪನ್ಯಾಸಕ ಹುದ್ದೆಗಳಿಗೆ (ಗ್ರಂಥಪಾಲಕರು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು ಸೇರಿ) ಜೂ.27ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ಅರ್ಹತೆಯ ಆಧಾರದ ಮೇಲೆ ಜೂ.28ರಂದು ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗುವುದು. ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ಯಾವುದೇ ಬದಲಾವಣೆ ಅಥವಾ ತಪ್ಪುಗಳಿದ್ದಲ್ಲಿ ಅವುಗಳನ್ನು ಸರಿಪಡಿಸಲು ಜೂ.29 ಮತ್ತು 30 ರವರೆಗೆ ಎರಡು ದಿನಗಳ ಕಾಲ ಅರ್ಜಿ ತಿದ್ದುಪಡಿ ಮಾಡಲು ಅವಕಾಶವಿದೆ.
ರಾಜ್ಯದ ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಲಭ್ಯವಿರುವ ಒಟ್ಟು ಬೋಧನಾ ಕಾರ್ಯಭಾರದ ಸಂಪೂರ್ಣ ವಿವರಗಳನ್ನು ಜು.1ರಂದು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದರಿಂದ ಅಭ್ಯರ್ಥಿಗಳು ತಮಗೆ ಸೂಕ್ತವಾದ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ. ಬಳಿಕ ಮೆರಿಟ್ ಪಟ್ಟಿಯ ಆಧಾರದ ಮೇಲೆ ಕಾಲೇಜು ಆಯ್ಕೆಗಾಗಿ ಜು.7 ರಿಂದ ಆನ್‌ಲೈನ್ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಕಾಲೇಜು ಶಿಕ್ಷಣ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ, ಅರ್ಜಿ ಸಲ್ಲಿಕೆಗಾಗಿ dce.karnataka.gov.in
ಗೆ ಭೇಟಿ ನೀಡಬಹುದು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net