ಅಂಗನವಾಡಿ ಕಾರ್ಯಕರ್ತರ ಗೌರವಧನ ಹೆಚ್ಚಿಸಿ
ವಿಜಯವಾಣಿ ಸುದ್ದಿಜಾಲ ಬೆಳಗಾವಿ
ರಾಜ್ಯ ಸರ್ಕಾರ ಚುನಾವಣೆಗೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕ ಸಮಾರಂಭದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಅಂಗನವಾಡಿಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಕಾರ್ಯಕರ್ತರು ಹಾಗೂ ಸಹಾಯಕಿಯರಿಗೆ ಗ್ರಾಚ್ಯುಟೆ, ಬಲವಂತವಾಗಿ ಬಿಎಲ್‌ಓ ಜವಾಬ್ದಾರಿ ನಿಲ್ಲಿಸಬೇಕು,ಎಸ್‌ಐಆರ್ ಸಮೀಕ್ಷೆಯ ವೇಳೆ ಕೆಲಸದ ಒತ್ತಡದಿಂದ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ಸೇರಿದವರಿಗೆ ವೈದ್ಯಕೀಯ ವೆಚ್ಚ ಸರ್ಕಾರವೇ ಭರಿಸುವುದು,ಅಂಗನವಾಡಿ ಕೆಲಸ ಬಿಟ್ಟು ಇತರೆ ಕೆಲಸಗಳನ್ನು ನೀಡುತ್ತಿಲ್ಲ ಕೇಂದ್ರದ ಕೆಲಸಗಳು ಕುಂಠಿತವಾಗುತ್ತಿವೆ.ಆದ್ದರಿಂದ ಸಮೀಕ್ಷೆ ಕೆಲಸದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.
ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ಪ್ರಾರಂಭಿಸಲು ಅವಕಾಶ ನೀಡುತ್ತಿರುವ ಅಂಗನವಾಡಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದೆ.ಆದ್ದರಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ-ಯುಕೆಜಿ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮೂಲಕ ಮನವಿ ಒತ್ತಾಯಿಸಲಾಯಿತು.
ನಾಗೇಶ ಸಾತೇರಿ, ವೈ.ಬಿ.ಶಿಗಿಹಳ್ಳಿ, ಮೀನಾಕ್ಷಿ ಕೊಟಗಿ, ಸವಿತಾ ಡಿಗ್ರೆ, ಮಂಗಲ ಪಾಟೀಲ ಇತರರು ಇದ್ದರು.