ಕಾಮುಕನಿಗೆ ಕಠಿಣ ಶಿಕ್ಷೆ ನೀಡಲು ಆಗ್ರಹ

ಸಿಂದಗಿ ನಗರದಲ್ಲಿ ವಿವಿಧ ಮಹಿಳಾ ಪರ ಸಂಘಟನೆಗಳ ವತಿಯಿಂದ ರಾಜಸ್ಥಾನದ ಬಾಲಕಿ ಅತ್ಯಾಚಾರ ಖಂಡಿಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸಿಂದಗಿ ನಗರದಲ್ಲಿ ವಿವಿಧ ಮಹಿಳಾ ಪರ ಸಂಘಟನೆಗಳ ವತಿಯಿಂದ ರಾಜಸ್ಥಾನದ ಬಾಲಕಿ ಅತ್ಯಾಚಾರ ಖಂಡಿಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ವಿವಿಧ ಮಹಿಳಾ ಪರ ಸಂಘಟನೆಗಳಿಂದ ರಾಜ್ಯ ಸರ್ಕಾರಕ್ಕೆ ಮನವಿ
  • ಉಪ ತಹಸೀಲ್ದಾರ್ ಐ.ಎಂ. ಬಳಗಾನೂರ ಅವರಿಗೆ ಮನವಿ
ಸಿಂದಗಿ: ನಗರದ ವಿವಿಧ ಮಹಿಳಾ ಪರ ಸಂಘಟನೆಗಳು ರಾಜಸ್ಥಾನದಲ್ಲಿ ನಡೆದ 13 ವರ್ಷದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಖಂಡಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಸ್ಫೂರ್ತಿ ಮಹಿಳಾ ಸಂಘಗಳ ಒಕ್ಕೂಟ, ಸಿಂಧು ತಾಯಿ ಒಕ್ಕೂಟ ಹಾಗೂ ಜನ ವೇದಿಕೆಯ ಮಹಿಳಾ ಕಾರ್ಯಕರ್ತೆಯರು ಜಂಟಿಯಾಗಿ ಉಪ ತಹಸೀಲ್ದಾರ್ ಐ.ಎಂ. ಬಳಗಾನೂರ ಅವರ ಮೂಲಕ ಗುರುವಾರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಸ್ಫೂರ್ತಿ ಮಹಿಳಾ ಒಕ್ಕೂಟದ ಸದಸ್ಯೆಯರು ಪ್ರತಿಭಾ ಚೆಳ್ಳಗಿ, ನೀಲಮ್ಮ ಯಡ್ರಾಮಿ, ಅಂಬಿಕಾ ಮಾಲಿ ಬಿರಾದಾರ ಮತ್ತಿತರರು ಮಾತನಾಡಿ, ಮಹಿಳೆಯರು ಮತ್ತು ಮಕ್ಕಳ ದೌರ್ಜನ್ಯಕ್ಕೆ ದೇಶದಲ್ಲಿ ರಕ್ಷಣೆಯೇ ಇಲ್ಲ ಎಂದು ಆಕ್ರೋಶ ವ್ಯಕ್ತ ಪಡೆಸಿದರು.
ಮಕ್ಕಳ ಮೇಲೆ ದೌರ್ಜನ್ಯ ವೆಸಗುವ, ಅತ್ಯಾಚಾರದಂತಹ ಅಮಾನವೀಯ ಕೃತ್ಯಗಳನ್ನು ನಡೆಸುವಂತಹವರಿಗೆ ಕಠಿಣ ಕಾನೂನು ಜಾರಿಯಾಗಬೇಕು. ಯಾವುದೇ ಸರ್ಕಾರ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಅಪರಾಧಿಗಳನ್ನು ಯಾವುದೇ ಕಾರಣಕ್ಕೂ ರಕ್ಷಿಸಬಾರದು ಎಂದು ಎಚ್ಚರಿಸಿದರು.
ಮಕ್ಕಳ ಮತ್ತು ಮಹಿಳೆಯರ ಹಕ್ಕುಗಳನ್ನು ಸದೆಬಡೆಯುವ, ಅವರ ಮೇಲಿನ ನಿರ್ದಯಿ ದಾಳಿಗಳನ್ನು ತೀವ್ರವಾಗಿ ಖಂಡಿಸಬೇಕು. ಸಮಾಜದ ಹೆಣ್ಣು ಗೌರವಯುತವಾಗಿ ಬದುಕಬೇಕು. ಪ್ರತಿ ಹೆಣ್ಣೂ ಅತ್ಯಂತ ಜಾಗರೂಕಳಾಗಿರಬೇಕು ಎಂದು ಕರೆ ನೀಡಿದರು.
ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗೆ ಸರ್ಕಾರ ಪ್ರಥಮ ಆದ್ಯತೆ ನೀಡಬೇಕು, ಪ್ರಕರಣದ ತನಿಖೆ ತ್ವರಿತಗೊಳಿಸಿ ತಪ್ಪಿತಸ್ಥರಿಗೆ ಕಾನೂನು ಕ್ರಮವಹಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಾರಸು ಮಾಡುವಂತೆ ಆಗ್ರಹಿಸಲಾಯಿತು.
ಅಲ್ಲದೇ, ನವದೆಹಲಿ ಜಂತರ್-ಮಂತರ್‌ನಲ್ಲಿ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ನಡೆಯುತ್ತಿರುವ ಹೋರಾಟಕ್ಕೂ ಮನವಿ ಮೂಲಕ ಬೆಂಬಲಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುತ್ತಿರುವ ಪರೀಕ್ಷಾ ಅಕ್ರಮವನ್ನು ಹೊರಗೆಳೆದು, ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸುವಂತೆ ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net