ಜಿಲ್ಲೆಗೆ ವಿಶೇಷ ಪ್ಯಾಕೇಜ್ ೋಷಣೆ ಮಾಡುವಂತೆ ಆಗ್ರಹ

ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಖ್ಯದ್ವಾರದ ಮುಂಭಾಗ ಕನ್ನಡಪರ ಸಂಘಟನೆ ವತಿಯಿಂದ ತಮಟೆ ಚಳವಳಿ ನಡೆಸಲಾಯಿತು. ಚಾ.ರಂ.ಶ್ರೀನಿವಾಸ್‌ಗೌಡ, ನಿಜಧ್ವನಿ ಗೋವಿಂದರಾಜು, ಪಣ್ಯದಹುಂಡಿ ರಾಜು, ತಾಂಡವಮೂರ್ತಿ, ಸುರೇಶ್‌ಗೌಡ, ಸುರೇಶ್ ಶೆಟ್ಟಿ, ಪರ್ವತ್ ರಾಜು, ಅಮಚವಾಡಿ ರಾಜು, ಲೋಕೇಶ್, ಶಿವಣ್ಣ ಹೊಸೂರು, ಅರುಣ್‌ಕುಮಾರ್ ಗೌಡ ಇದ್ದರು.
ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಖ್ಯದ್ವಾರದ ಮುಂಭಾಗ ಕನ್ನಡಪರ ಸಂಘಟನೆ ವತಿಯಿಂದ ತಮಟೆ ಚಳವಳಿ ನಡೆಸಲಾಯಿತು. ಚಾ.ರಂ.ಶ್ರೀನಿವಾಸ್‌ಗೌಡ, ನಿಜಧ್ವನಿ ಗೋವಿಂದರಾಜು, ಪಣ್ಯದಹುಂಡಿ ರಾಜು, ತಾಂಡವಮೂರ್ತಿ, ಸುರೇಶ್‌ಗೌಡ, ಸುರೇಶ್ ಶೆಟ್ಟಿ, ಪರ್ವತ್ ರಾಜು, ಅಮಚವಾಡಿ ರಾಜು, ಲೋಕೇಶ್, ಶಿವಣ್ಣ ಹೊಸೂರು, ಅರುಣ್‌ಕುಮಾರ್ ಗೌಡ ಇದ್ದರು.
Published on
ಚಾಮರಾಜನಗರ: ರಾಜ್ಯ ಸರ್ಕಾರ ಮಂಡಿಸಲಿರುವ ಬಜೆಟ್‌ನಲ್ಲಿ ಚಾಮರಾಜನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ೋಷಣೆ ಮಾಡಬೇಕು ಎಂದು ಒತ್ತಾಯಿಸಿ ಕನ್ನಡಪರ ಸಂಘಟನೆಗಳ ವತಿಯಿಂದ ಸೋಮವಾರ ತಮಟೆ ಚಳವಳಿ ನಡೆಸಲಾಯಿತು.
ನಗರದ ಜಿಲ್ಲಾಡಳಿತ ಭವನದ ಮುಖ್ಯದ್ವಾರದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸ್‌ಗೌಡ ಮಾತನಾಡಿ, ಜಿಲ್ಲೆಯಲ್ಲಿ ಬಡ, ಮಧ್ಯಮ ವರ್ಗದವರು, ಕೂಲಿ ಕಾರ್ಮಿಕರು ಹಾಗೂ ರೈತಾಪಿ ವರ್ಗ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಗಡಿಜಿಲ್ಲೆ ಚಾಮರಾಜನಗರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಶೇಷ ಅಭಿಮಾನವಿದ್ದು, ಈ ಬಾರಿಯ ಬಜೆಟ್‌ನಲ್ಲಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ 5000 ಕೋಟಿ ರೂ. ವಿಶೇಷ ಪ್ಯಾಕೇಜ್ ೋಷಣೆ ಮಾಡಬೇಕು. ಚಾಮರಾಜನಗರ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂ. ಅನುದಾನವನ್ನು ನೀಡುವ ಮೂಲಕ ಶೈಕ್ಷಣಿಕ ಅಭಿವೃದ್ಧಿಗೆ ನೆರವಾಗಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ದಿನೇ ದಿನೆ ಬಿಗಡಾಯಿಸುತ್ತಿದೆ. ಈ ನಿಟ್ಟಿನಲ್ಲಿ ನದಿಮೂಲದಿಂದ ಎಲ್ಲ ಕೆರೆಗಳನ್ನು ತುಂಬಿಸಬೇಕು. ಜಿಲ್ಲಾ ಕೇಂದ್ರದ ಕುಡಿಯುವ ನೀರಿನ ಯೋಜನೆ ಮಂದಗತಿಯಲ್ಲಿ ಸಾಗುತ್ತಿದ್ದು, ನೀರಾವರಿ ಯೋಜನೆಗಳಿಗೆ ವಿಶೇಷ ಅನುದಾನ ಮೀಸಲಿಡಬೇಕು. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ನೀಡಬೇಕು. ಜಿಲ್ಲೆಯಲ್ಲಿ ಕನ್ನಡದ ಬೆಳವಣಿಗೆ ದೃಷ್ಟಿಯಿಂದ ಕನ್ನಡ ಭವನವನ್ನು ಮಂಜೂರು ಮಾಡಬೇಕು. ಒಟ್ಟಾರೆಯಾಗಿ ಚಾಮರಾಜನಗರಕ್ಕೆ ವಿಶೇಷ ಅನುದಾನವನ್ನು ನೀಡುವ ಮೂಲಕ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡಬೇಕು ಎಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಹೋರಾಟಗಾರರಾದ ನಿಜಧ್ವನಿ ಗೋವಿಂದರಾಜು, ಪಣ್ಯದಹುಂಡಿ ರಾಜು, ತಾಂಡವಮೂರ್ತಿ, ಸುರೇಶ್‌ಗೌಡ, ಸುರೇಶ್ ಶೆಟ್ಟಿ, ಪರ್ವತ್ ರಾಜು, ಅಮಚವಾಡಿ ರಾಜು, ಲೋಕೇಶ್, ಶಿವಣ್ಣ ಹೊಸೂರು, ಅರುಣ್‌ಕುಮಾರ್ ಗೌಡ, ಮಹೇಶ್, ಮುತ್ತುರಾಜ್, ಪ್ರಕಾಶ್, ನಾಗರಾಜು ಹಾಗೂ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net