ರಸ್ತೆ ಒತ್ತುವರಿ ತೆರವುಗೊಳಿಸುವಂತೆ ಪಟ್ಟು road

ರಸ್ತೆ ಒತ್ತುವರಿ ತೆರವುಗೊಳಿಸುವಂತೆ ಪಟ್ಟು road
ರಸ್ತೆ ಒತ್ತುವರಿ ತೆರವುಗೊಳಿಸುವಂತೆ ಪಟ್ಟು road
Published on

ಪ್ರಮುಖ ಮುಖ್ಯಾಂಶಗಳು

  • ನಗರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣಗೆ ಮನವಿ
ಬಂಗಾರಪೇಟೆ: ಡಾ.ಬಿ.ಆರ್​.ಅಂಬೇಡ್ಕರ್​ ವೃತ್ತವನ್ನು ಉನ್ನತ ತಂತ್ರಜ್ಞಾನದೊಂದಿಗೆ ಅಭಿವೃದ್ಧಿಪಡಿಸಬೇಕು ಹಾಗೂ ಗಂಗಮ್ಮನಪಾಳ್ಯ ಮುಖ್ಯರಸ್ತೆಗೆ ಡಾ.ಬಿ.ಆರ್​.ಅಂಬೇಡ್ಕರ್​ ಮುಖ್ಯರಸ್ತೆ ಎಂದು ನಾಮಕರಣ ಮಾಡಿ ದಶಕಗಳು ಕಳೆದಿದ್ದು, ಸದರಿ ರಸ್ತೆ ಅಕ್ರಮ ಒತ್ತುವರಿದಾರರ ಕಪಿಮುಷ್ಠಿಯಲ್ಲಿ ಸಿಲುಕಿ ಒತ್ತುವರಿಯಾಗಿ ಕಿರಿದಾಗಿದೆ. ರಸ್ತೆಯನ್ನು ಕೂಡಲೇ ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿ ದಲಿತ ಸಂರ್ಷ ಸಮಿತಿ&ಕರ್ನಾಟಕ ಜಿಲ್ಲಾ ಸಂಚಾಲಕ ಕಲಾವಿದ ಯಲ್ಲಪ್ಪ ಪಟ್ಟಣದ ನಗರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ ಅವರಿಗೆ ಮನವಿ ಸಲ್ಲಿಸಿದರು. road
ಕಲಾವಿದ ಯಲ್ಲಪ್ಪ ಮಾತನಾಡಿ, ಡಾ.ಬಿ.ಆರ್​.ಅಂಬೇಡ್ಕರ್​ ಭವನ, ಕನ್ನಡ ಭವನ, ಪತ್ರಕರ್ತರ ಭವನ, ತೋಟಗಾರಿಕೆ ಇಲಾಖೆ, ಲಯನ್ಸ್​ ಭವನ ಕಟ್ಟಡಗಳಿಗೆ ಶಾಸಕ ಎಸ್​.ಎನ್​.ನಾರಾಯಣಸ್ವಾಮಿ ಅವರು ಅನುದಾನ ಬಿಡುಗಡೆ ಮಾಡಿ ಭವ್ಯ ಕಟ್ಟಡ ನಿರ್ಮಾಣ ಮಾಡುತ್ತಿರುವುದು ಹಾಗೂ ಅಂಬೇಡ್ಕರ್​ ರಸ್ತೆ ವಿಸ್ತರಣೆಗಾಗಿ 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದು ಸ್ವಾಗತಾರ್ಹ. ಆದರೆ ಈ ರಸ್ತೆಯು ತುಂಬಾ ಕಿರಿದಾಗಿದ್ದು, ರಸ್ತೆ ಬದಿಯ ಚರಂಡಿಯ ಮೇಲೆ ಮನೆ ಹಾಗೂ ವಾಣಿಜ್ಯ ಮಳಿಗೆ ಕಟ್ಟಿರುವುದರಿಂದ ಸವಾರರಿಗೆ, ಸಾರ್ವಜನಿಕರಿಗೆ ಕಷ್ಟವಾಗಿದೆ ಎಂದರು.
ಈ ವಿಚಾರವಾಗಿ ಸಂಬಂಧಪಟ್ಟ ಇಲಾಖೆಗೆ ಹಾಗೂ ಶಾಸಕರಿಗೆ ರಸ್ತೆ ವಿಸ್ತರಣೆ ವಿಚಾರವಾಗಿ ಅನೇಕ ಬಾರಿ ದಲಿತ ಸಂಟನೆಗಳು ಮತ್ತು ಗಂಗಮ್ಮನಪಾಳ್ಯ ನಿವಾಸಿಗಳು ಹಾಗೂ ಸಾರ್ವಜನಿಕರು ಮನವಿ ಸಲ್ಲಿಸಿದ್ದು, ಇದುವರೆಗೂ ಯಾರು ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net