ದಲಿತರಿಗೆ ಮುಖ್ಯಮಂತ್ರಿ ಪಟ್ಟ ನೀಡಲು ಪಟ್ಟು Demand to give the post of Chief Minister to Dalits

Demand to give the post of Chief Minister to Dalits
Demand to give the post of Chief Minister to Dalits
Published on
ಪಾವಗಡ: ರಾಜ್ಯದ ಪ್ರಸಕ್ತ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಶೋಷಿತ ಸಮುದಾಯಗಳ ಬಹುದಿನಗಳ ಬೇಡಿಕೆಯಾದ ದಲಿತರನ್ನು ಮುಖ್ಯಮಂತ್ರಿ ಮಾಡಬೇಕೆಂದು ಶ್ರೀ ವಾಲ್ಮೀಕಿ ಸಂಜಯ ಕುಮಾರ ಸ್ವಾಮೀಜಿ ಒತ್ತಾಯಿಸಿದರು.dalita
ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಶೋಷಿತ ಸಮುದಾಯದ ಗಟ್ಟಿ ಧ್ವನಿ ಮಾಜಿ ಸಹಕಾರ ಸಚಿವ ಕೆ.ಎನ್​.ರಾಜಣ್ಣ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದರು.
ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಅಧ್ಯಕ್ಷ ಪಾಳೇಗಾರ ಲೋಕೇಶ್​ ಮಾತನಾಡಿ, ರಾಜ್ಯ ಕಾಂಗ್ರೆಸ್​ ಸರ್ಕಾರ ವಾಲ್ಮೀಕಿ ಸಮುದಾಯದ ಮೂವರು ಶಾಸಕರಿಗೆ ಮಂತ್ರಿಸ್ಥಾನ ನೀಡಿ ಬಿ.ನಾಗೇಂದ್ರ ಹಾಗೂ ಕೆ.ಎನ್​.ರಾಜಣ್ಣ ಅವರನ್ನು ವಿನಾಕಾರಣ ಸಚಿವ ಸಂಪುಟದಿಂದ ವಜಾಗೊಳಿಸಿರುವುದು ಖಂಡನಿಯ. ರಾಜ್ಯ ಸರ್ಕಾರ ವಾಲ್ಮೀಕಿ ಸಮುದಾಯವನ್ನು ಕಡೆಗಣಿಸಿದರೆ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದರು
ಹಿಂದೆ ಬಿಜೆಪಿ ಸರ್ಕಾರ ವಾಲ್ಮೀಕಿ ಸಮುದಾಯದ ಶ್ರೀರಾಮುಲು ಅವರನ್ನು ಉಪಮುಖ್ಯಮಂತ್ರಿಮಾಡುತ್ತೇವೆಂದು ಭರವಸೆ ನೀಡಿ ಮೋಸ ಮಾಡಿದ್ದಕ್ಕೆ ಸಮುದಾಯ ವಿಧಾನಸಭಾ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡದ 15 ಕ್ಷೇತ್ರಗಳಲ್ಲಿ ಒಂದರಲ್ಲಿಯೂ ಸಹ ಬಿಜೆಪಿ ಗೆಲ್ಲದಂತೆ ತಕ್ಕ ಪಾಠ ಕಲಿಸಿದೆ. ರಾಜ್ಯದ ಮುಖ್ಯಮಂತ್ರಿ ಬದಲಾದರೆ ರಾಜ್ಯದ ದಲಿತ ಸಮುದಾಯದ ಪ್ರಬಲ ನಾಯಕರಾದ ಸತೀಶ್​ ಜಾರಕಿಹೊಳಿ, ಪರಮೇಶ್ವರ್​, ಮುನಿಯಪ್ಪ, ಮಲ್ಲಿಕಾರ್ಜುನ್​ ರ್ಖಗೆ ಯಾರನ್ನಾದರೂ ದಲಿತ ಮುಖ್ಯಮಂತ್ರಿ ಮಾಡಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net