ಕಾರ್ಮಿಕ ಸಂಹಿತೆ ರದ್ದುಪಡಿಸಲು ಪಟ್ಟು / DODABALLAPUR

ಕೇಂದ್ರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ದೊಡ್ಡಬಳ್ಳಾಪುರದ ತಾಲೂಕು ಕಚೇರಿ ವೃತ್ತದಲ್ಲಿ ಎಸ್​ಕೆಎಂ ಮತ್ತು ಜೆಸಿಟಿಯು ವತಿಯಿಂದ ಪ್ರತಿಭಟನೆ ಮಾಡಲಾಯಿತು. ಸಿಪಿಐಎಂ ರಾಜ್ಯ ಕಾರ್ಯದರ್ಶಿ ಪ್ರಭಾ ಬೆಳವಂಗಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ತಾಲೂಕು ಪ್ರಧಾನ ಕಾರ್ಯದರ್ಶಿ ರುದ್ರಾರಾಧ್ಯ, ದೊಡ್ಡಬೆಳವಂಗಲ ಭೂಸ್ವಾಧಿನ ವಿರೋಧಿ ಹೋರಾಟ ಸಮಿತಿಯ ಶಶಿಧರ್​, ದೇವನಹಳ್ಳಿ ರೈತ ಮುಖಂಡರಾದ ಕಾರಹಳ್ಳಿ ಶ್ರೀನಿವಾಸ್​, ಮಾರೇಗೌಡ, ಹೊಸಕೋಟೆ ವೆಂಕಟರಾಜು, ದಲಿತ ಮುಖಂಡ ಗೂಳ್ಯ ಹನುಮಣ್ಣ ಇತರರು ಇದ್ದರು.
ಕೇಂದ್ರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ದೊಡ್ಡಬಳ್ಳಾಪುರದ ತಾಲೂಕು ಕಚೇರಿ ವೃತ್ತದಲ್ಲಿ ಎಸ್​ಕೆಎಂ ಮತ್ತು ಜೆಸಿಟಿಯು ವತಿಯಿಂದ ಪ್ರತಿಭಟನೆ ಮಾಡಲಾಯಿತು. ಸಿಪಿಐಎಂ ರಾಜ್ಯ ಕಾರ್ಯದರ್ಶಿ ಪ್ರಭಾ ಬೆಳವಂಗಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ತಾಲೂಕು ಪ್ರಧಾನ ಕಾರ್ಯದರ್ಶಿ ರುದ್ರಾರಾಧ್ಯ, ದೊಡ್ಡಬೆಳವಂಗಲ ಭೂಸ್ವಾಧಿನ ವಿರೋಧಿ ಹೋರಾಟ ಸಮಿತಿಯ ಶಶಿಧರ್​, ದೇವನಹಳ್ಳಿ ರೈತ ಮುಖಂಡರಾದ ಕಾರಹಳ್ಳಿ ಶ್ರೀನಿವಾಸ್​, ಮಾರೇಗೌಡ, ಹೊಸಕೋಟೆ ವೆಂಕಟರಾಜು, ದಲಿತ ಮುಖಂಡ ಗೂಳ್ಯ ಹನುಮಣ್ಣ ಇತರರು ಇದ್ದರು.
Published on

ದೊಡ್ಡಬಳ್ಳಾಪುರ :

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕೂ ಕಾರ್ಮಿಕ ಸಂಹಿತೆಗಳನ್ನು ರದ್ದು ಮಾಡಬೇಕು ಮತ್ತು ವಿದ್ಯುತ್​ ಖಾಸಗೀಕರಣ ಕೈ ಬಿಡಬೇಕು ಎಂದು ಆಗ್ರಹಿಸಿ ಎಸ್​ಕೆಎಂ ಮತ್ತು ಜೆಸಿಟಿಯುನಿಂದ ಮಂಗಳವಾರ ಜೈಲ್​ ಭರೋ ಚಳವಳಿ ನಡೆಸಿ, ಉಪವಿಭಾಗಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಯಿತು.

ಈ ವೇಳೆ ಸಿಪಿಐಎಂ ಮುಖಂಡ ಆರ್​.ಚಂದ್ರತೇಜಸ್ವಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ ಹಾಗೂ ಯುವಜನ ವಿರೋಧಿ ಕಾನೂನು ಜಾರಿಯೊಂದಿಗೆ ಪ್ರಜಾಪ್ರಭುತ್ವದ ಹಕ್ಕು ದಮನ ಮಾಡಲಾಗುತ್ತಿದೆ. ಐತಿಹಾಸಿಕ ಕ್ವಿಟ್​ ಇಂಡಿಯಾ ಚಳವಳಿಯ ನೆನಪು ಮತ್ತು ಸ್ಫೂರ್ತಿಯಲ್ಲಿ "ಕಾರ್ಪೊರೇಟ್​ ಕಂಪನಿಗಳೇ ದೇಶ ಬಿಟ್ಟು ತೊಲಗಿ' ಘೋಷಣೆಯಡಿ ದೇಶಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಅಂದು ರಾಜರು ರೈತರ ಭೂಮಿ ಕಸಿದು ಮೇಲ್ವರ್ಗ, ರಾಜ ಪರಿವಾರಗಳಿಗೆ ನೀಡಿದಂತೆ ಇಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ರೈತರ ಭೂಮಿಯನ್ನು ಅಂಬಾನಿ, ಅದಾನಿ ಮುಂತಾದ ದೇಶಿ ಹಾಗೂ ವಿದೇಶಿ ಕಂಪನಿಗಳ ಬಕಾಸುರರ ಬಾಯಿಗೆ ಬಸಿಯುತ್ತಿವೆ ಎಂದು ದೂರಿದರು.

ತಾಲೂಕು ಕಚೇರಿ ಆವರಣದ ಒಳಗೆ ನುಗ್ಗಿದ ಪ್ರತಿಭಟನಕಾರರು, ಧರಣಿ ಕುಳಿತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತಾಲೂಕು ಕಚೇರಿ ಸಮೀಪದ ಜಗಜ್ಯೋತಿ ಬಸವೇಶ್ವರ ವೃತ್ತದಿಂದ ಮೆರವಣಿಗೆಯಲ್ಲಿ ಬಂದ ವಿವಿಧ ರೈತ, ಕಾರ್ಮಿಕ ಸಂಘಟನೆ ಕಾರ್ಯಕರ್ತರು ತಾಲೂಕು ಕಚೇರಿ ಒಳಗೆ ನುಗ್ಗಲು ಯತ್ನಿಸಿದರು. ಪೊಲೀಸರು ತಾಲೂಕು ಕಚೇರಿ ಗೇಟ್​ಗಳನ್ನು ಬಂದ್​ ಮಾಡಿಪ್ರತಿಭಟನಕಾರರು ಒಳಗೆ ನುಗ್ಗದಂತೆ ತಡೆಯೊಡ್ಡಿದರು. ಈ ವೇಳೆ ಕಾರ್ಮಿಕ ಸಂಘಟನೆಗಳ ಮುಖಂಡರಾದ ಪಿ.ಎ.ವೆಂಕಟೇಶ್​ ಮತ್ತು ರೇಣುಕಾರಾಧ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ ಜೋರಾಗಿ ಮಳೆ ಬಂದ ಕಾರಣ ಪ್ರತಿಭಟನಾಕಾರರನ್ನು ಪಕ್ಕಕ್ಕೆ ತಳ್ಳಿದ ಪೊಲೀಸರು ಕಾರ್ಮಿಕ ಮುಖಂಡರನ್ನು ಠಾಣೆಗೆ ಕರೆದೊಯ್ದರು. ಬಂಧಿತ ಮುಖಂಡರನ್ನು ಬಿಡುಗಡೆ ಮಾಡಲು ಆಗ್ರಹಿಸಿ ಎಸಿ ಕಚೇರಿ ಮುಂದೆ ಪ್ರತಿಭಟನಾಕಾರರು ಪಟ್ಟು ಹಿಡಿದು ಕುಳಿತರು. ಬಳಿಕ ಬಿಡುಗಡೆ ಮಾಡಲಾಯಿತು.

ಬೇಡಿಕೆಗಳು:

* ಸುಪ್ರೀಂಕೋರ್ಟ್​ ಆದೇಶದಂತೆ ಪರಿಷತ ಕನಿಷ್ಠ ವೇತನ ಜಾರಿಯಾಗಲಿ
* ನಾಲ್ಕು ಕಾರ್ಮಿಕ ಸಂಹಿತೆ ರದ್ದಾಗಲಿ
* ಬಲವಂತ ಹಾಗೂ ಅನ್ಯಾಯದ ಭೂಸ್ವಾಧಿನ- ನಿಲ್ಲಲಿ
* ವಿಬಿ ಜಿ ರಾಮ ಜಿ ಕಾಯ್ದೆ ರದ್ದಾಗಲಿ
* ವಿದ್ಯುತ್​ ತಿದ್ದುಪಡಿ ಕಾಯ್ದೆ&2025 ರದ್ದಾಗಬೇಕು
* ಬೀಜ ಕಾಯ್ದೆ ಮತ್ತು ಕೃಷಿ ಮಾರುಕಟ್ಟೆ ಕುರಿತ ರಾಷ್ಟ್ರೀಯ ಧೋರಣಾ ಚೌಕಟ್ಟು ನೀತಿ ರದ್ದಾಗಬೇಕು
* ಬ್ಯಾಂಕ್​, ವಿಮೆ, ಆರೋಗ್ಯ, ಶಿಕ್ಷಣ ಕ್ಷೇತ್ರಗಳ ಖಾಸಗೀಕರಣ ಬೇಡ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net