ಗ್ರಾಮದಲ್ಲಿ ಇತ್ತೀಚೆಗೆ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು, ಮುಖ್ಯ ರಸ್ತೆ ಸೇರಿದಂತೆ ಬಡಾವಣೆಗಳಲ್ಲಿ ನಾಯಿಗಳ ಹಿಂಡು ಅಡ್ಡಾದಿಡ್ಡಿಯಾಗಿ ಸಂಚರಿಸುತ್ತಿವೆ. ಓಡಿಸಲು ಹೋದರೆ ಕಚ್ಚಲು ಮುಂದಾಗುತ್ತಿದ್ದು, ಭಯವನ್ನು ಉಂಟು ಮಾಡಿವೆ. ಇದರಿಂದ ಮಕ್ಕಳು, ವೃದ್ಧರು ಹಾಗೂ ಮಹಿಳೆಯರು ಓಡಾಡಲು ಹೆಚ್ಚಿನ ತೊಂದರೆ ಅನುಭವಿಸುವಂತಾಗಿದೆ. ಇನ್ನು ಮುಖ್ಯ ರಸ್ತೆಯಲ್ಲಿ ನಾಯಿಗಳ ಹಿಂಡು ಓಡಾಡುತ್ತಿರುವುದರಿಂದ ಬೈಕ್ ಸವಾರರು ಆಯತಪ್ಪಿ ಬಿದ್ದು ಗಾಯಗೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವುದರ ಮೂಲಕ ನಿರ್ಭೀತಿಯಿಂದ ಸಂಚರಿಸಲು ಅನುಕೂಲ ಕಲ್ಪಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.