ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಗಡಿಪಾರು

ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಗಡಿಪಾರು
ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಗಡಿಪಾರು
Published on
ಚೇಳೂರು: ಪಟ್ಟಣದ ವೃತ್ತ ನಿರೀಕ್ಷಕ ಕಚೇರಿಯಲ್ಲಿ ಸೋಮವಾರ ರೌಡಿ ಪೆರೇಡ್​ ಮಾಡಲಾಯಿತು.ಇತ್ತೀಚೆನ ವರದಿಗಳ ಪ್ರಕಾರ ರಾಜ್ಯದ ಹಲವು ಭಾಗಗಳಲ್ಲಿ ರೌಡಿಗಳ ಹಾವಳಿ ನಿಯಂತ್ರಿಸಲು ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ.criminal acts
ಪಿಸಿಐ ಶ್ರೀನಿವಾಸ್​ ಮಾತನಾಡಿ, ರೌಡಿಶೀಟರ್​ಗಳಲ್ಲಿ ಇರುವಂತಹವರ ಅಪರಾಧ ಚಟುವಟಿಕೆಗಳಲ್ಲಿ ಅಥವಾ ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಕೃತ್ಯಗಳಲ್ಲಿ ಭಾಗಿಯಾಗದಂತೆ ಸಲಹೆ ಸೂಚನೆ ನೀಡಿದರು.
ಕೊಲೆ, ಕಳ್ಳತನ, ಗಲಾಟೆ ಸೇರಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದವರು ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ ಮಾಡಿಕೊಂಡು ಉತ್ತಮ ಪ್ರಜೆಗಳಾಗಿ ಬದುಕಬೇಕು. ಹಳೆಯ ತಪ್ಪುಗಳು ಮರುಕಳಿಸಿದರೆ ನಾವು ನಮ್ಮ ಕೆಲಸ ಆರಂಭಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕೋಮುಗಲಭೆಗಳಿಗೆ ಕುಮ್ಮಕ್ಕು ಕೊಡುವುದಾಗಲಿ, ಅದನ್ನು ಮಾಡುವುದಾಗಲಿ ಮಾಡಿದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಇಲ್ಲವಾದರೆ ತೊಂದರೆ ಅನುಭವಿಸಬೇಕಾಗುತ್ತದೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಗಡಿಪಾರು ಮಾಡುವುದಾಗಿ ಅಥವಾ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಚೇಳೂರು ವೃತ್ತ ನಿರೀಕ್ಷ ಪೊಲೀಸ್​ ಠಾಣೆಗೆ ರೌಡಿಶೀಟರ್​ಗಳನ್ನು ಕರೆಸಿ ಪ್ರತಿಯೊಬ್ಬರ ಮಾಹಿತಿಯನ್ನು ಪಡೆದು ರೌಡಿ ಪರೇಡ್​ ನಡೆಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net