ದೇವನಹಳ್ಳಿ ವಿಮಾನ ನಿಲ್ದಾಣದಿಂದ ನೇರವಾಗಿ ನಗರದ ಮತಗಟ್ಟೆಗೆ ಭೇಟಿ ನೀಡಿದ ಸಂಜಯ್ ಕುಮಾರ್ ಪರಿಶೀಲನೆ ನಡೆಸಿದ್ದು, ಜು.9ರವರೆಗೆ ಅವರು ಕರ್ನಾಟಕದಲ್ಲಿರಲಿದ್ದಾರೆ. ಜುಲೈ 9ರಂದು ಮಹಾರಾಷ್ಟ್ರಕ್ಕೆ ತೆರಳಲಿದ್ದು, ಈ ಮೂರೂ ದಿನಗಳಲ್ಲಿ ಅವರು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ, ಸಮಾಲೋಚನೆಗಳನ್ನು ನಡೆಸಲಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಮೂಲಗಳಿಂದ ತಿಳಿದು ಬಂದಿದೆ.