ಬಿಇಒ ಮಹೇಶ್ ಮಾತನಾಡಿ, ಮಕ್ಕಳಿಗೆ ಸಂವಿಧಾನ ಬದ್ಧವಾಗಿ ಹಕ್ಕುಗಳನ್ನು ನೀಡಿದ್ದು, ಒದಗಿಸುವಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಹಕ್ಕುಗಳಿಗೆ ಚ್ಯುತಿಯಾದಲ್ಲಿ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದರು. ಬಳಿಕ ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಸಲ್ಲಿಸಿದ ಆಹವಾಲಿಗೆ ಸಂಬಂಧಿಸಿದಂತೆ ಆಯೋಗದ ಮೂಲಕ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಸದಸ್ಯ ವೆಂಕಟೇಶ್ ತಿಳಿಸಿದರು.
ಈ ಸಂದರ್ಭದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್, ಬಿಆರ್‌ಸಿ ವೆಂಕಟೇಶ್, ಶಿಕ್ಷಣ ಸಂಯೋಜಕರಾದ ಅಶೋಕ್, ರವೀಂದ್ರ, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅದ್ಯಕ್ಷ ಶಿವಮಲ್ಲು, ವಿವೇಕಾನಂದ ಸಂಸ್ಥೆ ಪ್ರಾಂಶುಪಾಲ ಮಧುಸೂದನ್, ಮುಖ್ಯ ಶಿಕ್ಷಕಿ ಸತ್ಯಪ್ರಿಯಾ, ಎಎಸ್‌ಐ ಮಹೇಶ್‌ಕುಮಾರ್, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯೋಜಕ ಸಿದ್ದರಾಜು ಇತರರು ಇದ್ದರು.