ಕೊಳ್ಳೇಗಾಲ: ಕೊಳ್ಳೇಗಾಲ ಕ್ಷೇತ್ರದ ವಿವಿಧೆಡೆ ಕ್ಷಿುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ ಶಾಸಕ ಎ.ಆರ್. ಕೃಷ್ಣಮೂರ್ತಿ ಚಾಲನೆ ನೀಡಿದರು.
ಚಿಲಕವಾಡಿ ಮುಖ್ಯ ರಸ್ತೆಯ ಸಮೀಪ ವ್ಹೇಬ್ರಿಡ್ಜ್ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ಆಲಹಳ್ಳಿ ಗ್ರಾಮದಲ್ಲಿ ಚರಂಡಿ ಮತ್ತು ರಸ್ತೆ ಅಭಿವೃದ್ಧಿ , ಗೊಬ್ಬಳಿಪುರ ಗ್ರಾಮದಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ವೀರಶೈವ ಲಿಂಗಾಯತ ಸಮುದಾಯದವರ ಬಡಾವಣೆಯಲ್ಲಿ ರಸ್ತೆ ಅಭಿವೃದ್ಧಿ , ಕುಂತೂರು ಗ್ರಾಮದ ವೀರಶೈವ ಲಿಂಗಾಯತ ಸಮುದಾಯದ ಬಡಾವಣೆಯಲ್ಲಿ 30ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ , ಹರಳೆ ಗ್ರಾಮದ ನಾಯಕ ಸಮುದಾಯ ಬಡಾವಣೆಗೆ 35 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ಕೆಂಪನಪಾಳ್ಯ ಗ್ರಾಮದ ನಾಯಕರ ಬಡಾವಣೆಯಲ್ಲಿ 35 ಲಕ್ಷ ರೂ. ವೆಚ್ಚದ ರಸ್ತೆ ಮತ್ತು ಚರಂಡಿ ಅಭಿವೃದ್ಧಿ , ಮೊಳಗನಕಟ್ಟೆಯಲ್ಲಿ 35 ಲಕ್ಷ ರೂ.ವೆಚ್ಚದ ರಸ್ತೆ ಮತ್ತು ಚರಂಡಿ ಅಭಿವೃದ್ಧಿ , ಚಿಲಕವಾಡಿ ಬಳಿ 67 ಲಕ್ಷ ರೂ. ವೆಚ್ಚದಲ್ಲಿ ವ್ಹೇಬ್ರಿಡ್ಜ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಅಂತೆಯೇ, ಟಗರಪುರದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದ್ದ ನೂತನ ಗ್ರಂಥಾಲಯವನ್ನು ಲೋಕಾರ್ಪಣೆ ಮಾಡಲಾಗಿದೆ. ಕುಣಗಳ್ಳಿ ಗ್ರಾಮದಲ್ಲಿ 23 ಲಕ್ಷ ರೂ. ವೆಚ್ಚದ ಶಾಲಾ ಕ್ಷಿಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಿದ್ದೇನೆ ಎಂದು ಮಾಹಿತಿ ನೀಡಿದರು.
ಕುಂತೂರಿನಲ್ಲಿರುವ ಸಕ್ಕರೆ ಕಾರ್ಖನೆಗೆ ರೈತರ ತಂದ ಕಬ್ಬನ್ನು ತೂಕ ಮಾಡುವಾಗ ವ್ಯತ್ಯಾಸ ಮಾಡಲಾಗುತ್ತಿದೆ ಎಂಬ ಆರೋಪವಿತ್ತು. ಹಾಗಾಗಿ ಸರ್ಕಾರದ ಚರ್ಚಿಸಿ ಇದೀಗ ಚಿಲಕವಾಡಿ ಬಳಿ ವ್ಹೇಬ್ರಿಡ್ಜ್ ನಿರ್ಮಾಣಕ್ಕೆ ಅನುಮೋದನೆ ಪಡೆಯಲಾಗಿದ್ದು, ಇಂದು ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಟೆಂಡರ್‌ದಾರರು ಗುಣಮಟ್ಟ ಕಾಮಗಾರಿ ನಡೆಸಬೇಕು ಎಂದು ಸೂಚನೆ ನೀಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನಪರವಾದ ಕೆಲಸಗಳನ್ನು ನಡೆಸುತ್ತಿದೆ. ಈ ಹಿಂದೆ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಅಭಿವೃದ್ಧಿ ಕೆಲಸಗಳು ಸಾಗುತ್ತಿದೆ ಎಂದರು.