ಮತ್ತಿತಾಳೇಶ್ವರಸ್ವಾಮಿ ದೇಗುಲಕ್ಕೆ ಭಕ್ತರ ದಂಡು

ಮಳವಳ್ಳಿ ತಾಲೂಕಿನ ಕಂದೇಗಾಲ-ಕಲ್ಲುವೀರನಹಳ್ಳಿ ನಡುವೆ ಇರುವ ಮತ್ತಿತಾಳೇಶ್ವರಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ನಾಗರಪಂಚಮಿ ಹಿನ್ನೆಲೆಯಲ್ಲಿ ಭಕ್ತರು ನಾಗರ ಕಲ್ಲಿಗೆ ಹಾಗೂ ಹುತ್ತಕ್ಕೆ ಹಾಲೆರೆದು ಪೂಜೆ ಸಲ್ಲಿಸಿದರು.
ಮಳವಳ್ಳಿ ತಾಲೂಕಿನ ಕಂದೇಗಾಲ-ಕಲ್ಲುವೀರನಹಳ್ಳಿ ನಡುವೆ ಇರುವ ಮತ್ತಿತಾಳೇಶ್ವರಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ನಾಗರಪಂಚಮಿ ಹಿನ್ನೆಲೆಯಲ್ಲಿ ಭಕ್ತರು ನಾಗರ ಕಲ್ಲಿಗೆ ಹಾಗೂ ಹುತ್ತಕ್ಕೆ ಹಾಲೆರೆದು ಪೂಜೆ ಸಲ್ಲಿಸಿದರು.
Published on

ಮಳವಳ್ಳಿ:

ತಾಲೂಕಿನ ಕಂದೇಗಾಲ-ಕಲ್ಲುವೀರನಹಳ್ಳಿ ನಡುವೆ ಇರುವ ಮತ್ತಿತಾಳೇಶ್ವರಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ನಾಗರಪಂಚಮಿ ಹಿನ್ನೆಲೆಯಲ್ಲಿ ಭಕ್ತರು ನಾಗರ ಕಲ್ಲಿಗೆ ಹಾಗೂ ಹುತ್ತಕ್ಕೆ ಹಾಲೆರೆದು ಪೂಜೆ ಸಲ್ಲಿಸುವುದರ ಜತೆಗೆ ದೇವರ ದರ್ಶನ ಪಡೆದರು.

ತಾಲೂಕು ಸೇರಿದಂತೆ ದೂರದ ಊರುಗಳಿಂದಲೂ ಸಾವಿರಾರು ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತ ಸಮೂಹ ಬೆಳಗ್ಗಿನಿಂದಲೇ ಮತ್ತಿತಾಳೇಶ್ವರಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದುಕೊಂಡರು. ನಂತರ ದೇವಸ್ಥಾನದ ಆವರಣದಲ್ಲಿ ನಾಗರ ಕಲ್ಲಿಗೆ ಹಾಗೂ ಹುತ್ತಕ್ಕೆ ಹಾಲೆರೆದು ನಮಿಸಿದರು. ನಾಗರ ಪಂಚಮಿ ಹಿನ್ನೆಲೆಯಲ್ಲಿ ಗರ್ಭಗುಡಿಯ ಮತ್ತಿತಾಳೇಶ್ವರಸ್ವಾಮಿ ಮೂಲ ಮೂರ್ತಿಗೆ ಅರ್ಚಕ ವರ್ಗ ವಿವಿಧ ಅಭಿಷೇಕ ನೆರವೇರಿಸಿ ವಿವಿಧ ಹೂಗಳಿಂದ ಅಲಂಕಾರಗೊಳಿಸಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.
ದೇವಸ್ಥಾನದ ಮುಂಭಾಗದ ಕಲ್ಯಾಣಿಯಲ್ಲಿ ಮಧ್ಯಾಹ್ನ ಮದ್ದೂರು ತಾಲೂಕಿನ ಹೊನ್ನಾಯಕನಹಳ್ಳಿ ಮಂಟೇಸ್ವಾಮಿ ಬಸವಪ್ಪ, ಮತ್ತಿತಾಳೇಶ್ವರ ಬಸವಪ್ಪ ಮತ್ತು ಉತ್ಸವಮೂರ್ತಿಗೆ ಹೂವು ಹೊಂಬಾಳೆ ಮೂಲಕ ಪೂಜೆ ಸಲ್ಲಿಸಿ ದೇವಸ್ಥಾನದವರೆಗೆ ಮೆರವಣಿಗೆ ನಡೆಸಲಾಯಿತು.
ಬೆಂಗಳೂರು, ಮೈಸೂರು, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ದೇವರ ದರ್ಶನಕ್ಕೆ ಬಂದಿದ್ದ ಭಕ್ತರಿಗೆ ಕಂದೇಗಾಲ, ಕಲ್ಲುವೀರನಹಳ್ಳಿ, ಮೊಳೆದೊಡ್ಡಿ, ಅಮೃತೇಶ್ವರನಹಳ್ಳಿ ಗ್ರಾಮದ ಮುಖಂಡರು ಹಾಗೂ ಮತ್ತಿತಾಳೇಶ್ವರಸ್ವಾಮಿ ಆಟೋ ಚಾಲಕರ ಸಂಘದ ವತಿಯಿಂದ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net