ಮಕ್ಕಳ ಆರೋಗ್ಯಕ್ಕೆ ಜಂತುಹುಳು ನಿವಾರಣೆ ಮುಖ್ಯ

ಸರಗೂರು ತಾಲೂಕಿನ ಡಾ.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಆಯೋಜಿಸ್ದಿ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮದಲ್ಲಿ ಡಾ.ಚಂದ್ರಶೇಖರ ಜಂತು ನಿವಾರಕ ಮಾತ್ರೆ ನೀಡಿದರು.
ಸರಗೂರು ತಾಲೂಕಿನ ಡಾ.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಆಯೋಜಿಸ್ದಿ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮದಲ್ಲಿ ಡಾ.ಚಂದ್ರಶೇಖರ ಜಂತು ನಿವಾರಕ ಮಾತ್ರೆ ನೀಡಿದರು.
Published on

ಸರಗೂರು:

ಮಕ್ಕಳ ಆರೋಗ್ಯದ ದೃಷ್ಟಿಯಿಂದ ಜಂತುಹುಳು ನಿವಾರಕ ಮಾತ್ರೆ ಸೇವನೆ ಅತ್ಯಂತ ಮಹತ್ವದ್ದಾಗಿದೆ ಎಂದು ಬಿ ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ಅಡಳಿತ ವೈದ್ಯಾಧಿಕಾರಿ ಡಾ.ಚಂದ್ರಶೇಖರ ತಿಳಿಸಿದರು.


ತಾಲೂಕಿನ ಬಿ. ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಟಕೆರೆ ಭೋವಿ ಕಾಲನಿಯ ಡಾ. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸೋಮವಾರ ಬಿ. ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು .


ಮಕ್ಕಳಲ್ಲಿ ಜಂತುಹುಳು ಸೋಂಕಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆ ವತಿಯಿಂದ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಂತುಹುಳು ನಿವಾರಣಾ ಮಾತ್ರೆ ಸೇವಿಸುವುದರಿಂದ ಮಕ್ಕಳಲ್ಲಿ ರಕ್ತಹೀನತೆ, ಅಪೌಷ್ಟಿಕತೆ ಹಾಗೂ ದೈಹಿಕ ಬೆಳವಣಿಗೆಗೆ ಸಂಬಂಧಿಸಿದ ಸಮಸ್ಯೆಗಳನ್ನು ತಡೆಗಟ್ಟಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.


ಡಾ.ಅಂಬೇಡ್ಕರ್ ವಸತಿ ಶಾಲೆ ಮುಖ್ಯ ಶಿಕ್ಷಕರು ಕಾಳಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳ ಆರೋಗ್ಯವೇ ಅವರ ಶೈಕ್ಷಣಿಕ ಪ್ರಗತಿಗೆ ಪ್ರಮುಖ ಆಧಾರ. ಮಕ್ಕಳಲ್ಲಿ ಜಂತುಹುಳು ಸೋಂಕು ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದರು. ಈ ಸಂದರ್ಭದಲ್ಲಿ ಆರೋಗ್ಯ ಸುರಕ್ಷತಾ ಅಧಿಕಾರಿ ಅನಿತಾ, ಡಾ.ಅಂಬೇಡ್ಕರ್ ವಸತಿ ಶಾಲೆ ವಾರ್ಡನ್ ಪದ್ಮರಾಜ್, ಆಶಾ ಕಾರ್ಯಕರ್ತೆ ಅನಿತಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net