Dharamsthala case | ಎಸ್​ಐಟಿ ಪ್ರಾಥಮಿಕ ವರದಿ ಸಲ್ಲಿಕೆ; ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ: ವಕ್ತಾರ ಕೆ ಪಾಶ್ವನಾಥ್‌ ಜೈನ್‌

Dharamsthala case
Dharamsthala case
Published on
ಬೆಂಗಳೂರು/ ದಕ್ಷಿಣ ಕನ್ನಡ: ಶ್ರೀ ಕ್ಷೇತ್ರ ಧರ್ಮಸ್ಥಳ ವಿಚಾರಕ್ಕೆ ಸಂಬಂಧಿಸಿದಂತೆ ರಚಿಸಲಾಗಿದ್ದ ವಿಶೇಷ ತನಿಖಾ ತಂಡ, ಪ್ರಾಥಮಿಕ ತನಿಖೆಯ ಮಾಹಿತಿಯನ್ನು ನ್ಯಾಯಾಲಯಕ್ಕೆ ಒದಗಿಸಿದೆ ಎಂದು ಮಾಧ್ಯಮಗಳಲ್ಲಿ ನೋಡಿ ತಿಳಿದಿದ್ದೇವೆ. ಇದರನ್ವಯ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ರೂಪಿಸಿರುವುದು ಸ್ಪಷ್ಟವಾಗಿ ತಿಳಿದು ಬರುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳ ಕಚೇರಿಯ ವಕ್ತಾರರಾದ ಕೆ ಪಾಶ್ವನಾಥ್‌ ಜೈನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧಾರ್ಮಿಕ ಶ್ರದ್ಧಾಕೇಂದ್ರಗಳ ಮೇಲಿನ ವ್ಯವಸ್ಥಿತ ಷಡ್ಯಂತ್ರಗಳು ಮೇಲಿಂದ ಮೇಲೆ ನಡೆಯುತ್ತಾ ಬಂದಿದೆ ಎನ್ನುವುದಕ್ಕೆ ಇದೂ ಕೂಡ ಒಂದು ನೈಜ ಉದಾಹರಣೆಯಾಗಿದ್ದು, ಇದೇ ರೀತಿಯ ಷಡ್ಯಂತ್ರ ಮುಂದೆಂದೂ ಮತ್ಯಾವ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲಾಗದಂತೆ ತಡೆಯುವ ಅವಶ್ಯಕತೆ ಇದೆ. ಆದ್ದರಿಂದ ಸರ್ಕಾರ ಈ ವಿಚಾರವಾಗಿ ಗಮನವಹಿಸಬೇಕೆಂದು ವಿನಂತಿ ಮಾಡುತ್ತೇವೆ ಮತ್ತು ಈ ಷಡ್ಯಂತ್ರದ ಹಿಂದಿರುವ ಶಕ್ತಿಗಳಿಗೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net