ದೋರನಹಳ್ಳಿ : ಶೈಕ್ಷಣಿಕ, ಸಾಂಸ್ಕೃತಿಕ, ಆರ್ಥಿಕ, ಧಾರ್ಮಿಕ ಹಾಗೂ ಸಾಮಾಜಿಕವಾಗಿ ಉತ್ತಮ ಕಾರ್ಯ ಮಾಡುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ನೆರವಿನಿಂದ ಅನೇಕ ಹೆಣ್ಮಕ್ಕಳು ಉಜ್ವಲ ಭವಿಷ್ಯ ಕಟ್ಟಿಕೊಂಡಿದ್ದಾರೆ. ಹೀಗಿರುವಾಗ ಯಾವುದೇ ರೀತಿಯ ಅಪಪ್ರಚಾರ ಶ್ರೀ ಮಂಜುನಾಥರ ಶಕ್ತಿ ಕುಂದಿಸಲು ಸಾಧ್ಯವಿಲ್ಲ ಎಂದು ಧರ್ಮಸ್ಥಳ ಸಂಸ್ಥೆ ಯೋಜನಾಽಕಾರಿ ಕುಮಾರ ಬಣಕಾರ ಹೇಳಿದರು.