ನೀಟ್ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಹಾಗೂ ದೆಹಲಿಯಲ್ಲಿ ನಡೆಯುತ್ತಿರುವ ಪಾರ್ಲಿಮೆಂಟ್ ಚಲೋ ಹೋರಾಟಕ್ಕೆ ಬೆಂಬಲ ಸೂಚಿಸಿ ಆಲï ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ನ ಜಿ¯್ಲÁ ಸಮಿತಿ ಸೋಮವಾರ ನಗರದ ಸುಭಾಷ್ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಸಂಚಾಲಕಿ ಶಿಲ್ಪಾ ಬಿ.ಕೆ.,ರಂಜಿತಾ, ನಾಗರಾಜ್, ಶ್ರೀಶೈಲ್, ಭಾಗ್ಯಶ್ರೀ, ರೋಜಾ, ದೇವೀಂದ್ರಮ್ಮ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಸಂಚಾಲಕಿ ಶಿಲ್ಪಾ ಬಿ.ಕೆ. ಒತ್ತಾಯ
ಯಾದಗಿರಿಯಲ್ಲಿ ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಪ್ರತಿಭಟನೆ
ಯಾದಗಿರಿ :ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಲï ಇಂಡಿಯಾ ಡೆಮಾಕ್ರಟಿಕï ಸ್ಟೂಡೆಂಟ್ಸ್ ಆರ್ಗನೈಸೇಷನ್ ಜಿ¯್ಲÁ ಸಮಿತಿ ಸೋಮವಾರ ಪ್ರತಿಭಟನೆ ನಡೆಸಿತು.
ನೀಟ್ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಹಾಗೂ ದೆಹಲಿಯಲ್ಲಿ ನಡೆಯುತ್ತಿರುವ ಪಾರ್ಲಿಮೆಂಟ್ ಚಲೋ ಹೋರಾಟಕ್ಕೆ ಬೆಂಬಲ ನಗರದ ಸುಭಾಷ್ ವೃತ್ತದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿವಿಧ ರಾಷ್ಟಿçÃಯ ಮಟ್ಟದ ಪ್ರವೇಶ ಪರೀಕ್ಷೆಗಳಲ್ಲಿ ಅಕ್ರಮಗಳು ಬೆಳಕಿಗೆ ಬರುತ್ತಿರುವುದು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿದ್ಯಾರ್ಥಿಗಳ ನಂಬಿಕೆ ಕುಗ್ಗಿಸುತ್ತಿದೆ ಹೀಗಾಗಿ ಕೂಡಲೇ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಲಕ್ಷಾಂತರ ವಿದ್ಯಾರ್ಥಿಗಳು ವರ್ಷಪೂರ್ತಿ ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರೂ, ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಆಡಳಿತ ವೈ-Àಲ್ಯದಿಂದ ಅವರ ಭವಿಷ್ಯ ಸಂಕಷ್ಟಕ್ಕೆ ಸಿಲುಕುತ್ತಿದೆ ಎಂದು ಅವರು ಆರೋಪಿಸಿದರು.
ಕೇಂದ್ರ ಸರ್ಕಾರ ಹಾಗೂ ರಾಷ್ಟಿçÃಯ ಪರೀಕ್ಷಾ ಸಂಸ್ಥೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಖಚಿತಪಡಿಸಬೇಕು. ನೀಟ್ ಸೇರಿದಂತೆ ಎಲ್ಲ ರಾಷ್ಟಿçÃಯ ಪ್ರವೇಶ ಪರೀಕ್ಷೆಗಳನ್ನು ನ್ಯಾಯಸಮ್ಮತವಾಗಿ ನಡೆಸಬೇಕು. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು, ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸದಸ್ಯರಾದ ರಂಜಿತಾ ನಾಗರಾಜ್, ಶ್ರೀಶೈಲ್, ಭಾಗ್ಯಶ್ರೀ, ರೋಜÁ, ದೇವೀಂದ್ರಮ್ಮ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.