ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಬೃಹತ್ ಪ್ರತಿಭಟನೆ! Dharwad Protest
ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಬೃಹತ್ ಪ್ರತಿಭಟನೆ! Dharwad Protest
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ಬಿಜೆಪಿ ನೇತೃತ್ವದಲ್ಲಿ ಶಿಕ್ಷಣ ಕಾಶಿ ಧಾರವಾಡದಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ
ವಿಧಾನಸಭೆ ವಿಪಕ್ಷದ ನಾಯಕ ಆರ್. ಅಶೋಕ್ ಪ್ರತಿಭಟನೆಯಲ್ಲಿ ಭಾಗಿಯಾಗಿ
ಬಿಜೆಪಿಯೊಂದಿಗೆ ಪ್ರತಿಭಟನೆಗೆ ಇಳಿದಿರುವ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘ
ಧಾರವಾಡ: ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಬಿಜೆಪಿ ನೇತೃತ್ವದಲ್ಲಿ ಧಾರವಾಡ ( Dharwad Protest ) ಶ್ರೀನಗರದಿಂದ ಬೃಹತ್ ಪ್ರತಿಭಟನಾ ರ್ಯಾಲಿ ಆರಂಭವಾಗಿದೆ.
ರ್ಯಾಲಿಯು ಶ್ರೀನಗರದಿಂದ ಜಯನಗರ, ಮಿಚಗನ್ ಕಾಂಪೌಂಡ್ ಮಾರ್ಗವಾಗಿ ಜುಬಿಲಿ ವೃತ್ತವನ್ನು ತಲುಪಲಿದೆ. ಜಯನಗರದಲ್ಲಿ ವಿಧಾನಸಭೆ ವಿಪಕ್ಷದ ನಾಯಕ ಆರ್. ಅಶೋಕ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನೆ ವೇಳೆ ಸಚಿವರ ಫೋಟೋಗಳು ಸಹ ವಿದ್ಯಾರ್ಥಿಗಳು ಸುಟ್ಟು ಹಾಕಿ ಆಕ್ರೋಶ ಹೊರಹಾಕಿದ್ದಾರೆ.
ಬಿಜೆಪಿಯೊಂದಿಗೆ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘವು ಪ್ರತಿಭಟನೆಗಿಳಿದಿದ್ದು, ಅನುಮತಿ ಇಲ್ಲದಿದ್ದರೂ ವಿದ್ಯಾರ್ಥಿ ಸಮೂಹ ಜಮಾಯಿಸಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪ್ರತಿಭಟನೆ ವೇಳೆ ವಿದ್ಯಾರ್ಥಿ ಸಮೂಹದ ಚೀರಾಟ, ಕೂಗಾಟ ನಿಯಂತ್ರಣಕ್ಕೆ ಬರುತ್ತಿಲ್ಲ. ಈ ವೇಳೆ ವಿದ್ಯಾರ್ಥಿಗಳಿಗೆ ಸಮಾಧಾನವಾಗಿ ಇರುವಂತೆ ಆರ್. ಅಶೋಕ ಅವರು ವಿನಂತಿಸಿದರೂ ವಿದ್ಯಾರ್ಥಿಗಳು ಮಾತ್ರ ಸುಮ್ಮನಾಗುತ್ತಿಲ್ಲ. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.