ಎಸ್‌ಎಸ್‌ಎಲ್‌ಸಿ ಫಲಿತಾಂಶ ಕ್ಷೀಣಿಸಿದರೆ ಶಿಸ್ತುಕ್ರಮ

ಸಿಇಒ ರಾಹುಲ ಶಿಂಧೆ
ಸಿಇಒ ರಾಹುಲ ಶಿಂಧೆ
Published on
ಬೆಳಗಾವಿ: ಈ ಸಲದ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ ಕಡಿಮೆ ಸಾಧನೆ ಮಾಡಿದ ಸರ್ಕಾರಿ, ಖಾಸಗಿ ಶಾಲೆಗಳ ಶಿಕ್ಷಕರು, ಮುಖ್ಯಶಿಕ್ಷಕರು ಹಾಗೂ ಸಂಬಂಧಿತ ಅಧಿಕಾರಿ, ಶಾಲಾ ಸಂಸ್ಥೆಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಿದ್ದು, ಈಗಿನಿಂದಲೇ ಫಲಿತಾಂಶ ಸುಧಾರಣೆಗೆ ಕ್ರಮಕೈಗೊಳ್ಳಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಸೂಚಿಸಿದರು.
ಜಿಪಂ ಸಭಾಂಗಣದಲ್ಲಿ ಬುಧವಾರ ಎಸ್‌ಎಸ್‌ಎಲ್ಸಿ ಫಲಿತಾಂಶ ಸುಧಾರಣೆ ಕುರಿತು ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು, ಎಲ್ಲ ಪ್ರೌಢಶಾಲೆಗಳ ಮುಖ್ಯಶಿಕ್ಷಕರು ಹಾಗೂ ಅನುಷ್ಠಾನ ಅಧಿಕಾರಿಗಳಿಗಾಗಿ ಏರ್ಪಡಿಸಿದ್ದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶೇ.10ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ಮುಂದಿನ ಎಲ್ಲ ಪರೀಕ್ಷೆಗಳಲ್ಲಿ ಫಲಿತಾಂಶ ಸುಧಾರಣೆಗೆ ಕೈಗೊಳ್ಳಬೇಕು. ವಿಷಯವಾರು ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಕಲಿಕಾಂಶಗಳ ಪ್ರಗತಿಗೆ ಶ್ರಮಿಸಬೇಕು. ಪ್ರಥಮ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಶೇ.20ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ಆಯಾ ತಾಪಂ ಇಒಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಬೇಕು ಎಂದು ಸೂಚಿಸಿದರು.
ಜಿಪಂ ಉಪಕಾರ್ಯದರ್ಶಿ ಬಸವರಾಜ ಅಡವಿಮಠ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎಲ್.ಎಸ್.ಹಿರೇಮಠ, ಚಿಕ್ಕೋಡಿ ಡಿಡಿಪಿಐ ಸೀತಾರಾಮು ಆರ್.ಎಸ್., ಡಯಟ್ ಪ್ರಾಚಾರ್ಯ ಅಶೋಕ ಸಿಂದಗಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net