ನಗರದ ಕೆಆರ್‌ಸಿಇಎಸ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲಾ 18 ಸ್ಕೌಟ್ಸ್, 21 ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪುರಸ್ಕಾರ ದೊರೆತಿರುವ ಹಿನ್ನೆಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರಮಾಣ ಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪಾಲನೆ, ಸೇವಾ ಮನೋಭಾವ, ದೇಶಭಕ್ತಿ, ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಮಾಜ ಸೇವೆ ಮತ್ತು ರಾಷ್ಟ್ರ ನಿರ್ಮಾಣದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.