ಹನೂರು: ಪಟ್ಟಣ ಪೊಲೀಸ್ ಠಾಣೆಗೆ ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್ ಭೇಟಿ ನೀಡಿ ವಾರ್ಷಿಕ ಪರಿವೀಕ್ಷಣೆ ನಡೆಸಿ ಅಗತ್ಯ ಮಾರ್ಗದರ್ಶನ ನೀಡಿದರು.
ಶಿಷ್ಟಾಚಾರದಂತೆ ಎಸ್ಪಿ ಅವರನ್ನು ಬರಮಾಡಿಕೊಂಡ ಪೊಲೀಸ್ ಅಧಿಕಾರಿಗಳು ಠಾಣೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಬಳಿಕ ಎಸ್ಪಿ ಎಲ್ಲ ದಾಖಲಾತಿಗಳು, ಕಡತಗಳು ಹಾಗೂ ರಿಜಿಸ್ಟರ್‌ಗಳನ್ನು ಪರಿಶೀಲಿಸಿದರು. ಬಾಕಿಯಿರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕು. ಸಾರ್ವಜನಿಕರೊಂದಿಗೆ ಸ್ನೇಹದಿಂದ ವರ್ತಿಸಬೇಕು. ಸೇವೆಯಲ್ಲಿ ಶಿಸ್ತು ಕಾಪಾಡಿಕೊಳ್ಳಬೇಕು.
ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಅಗತ್ಯ ಮುಂಜಾಗ್ರತಾ ಕ್ರಮವಹಿಸುವುದರ ಮೂಲಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಠಾಣೆಯ ಒಳಾಂಗಣ ಹಾಗೂ ಹೊರಾಂಗಣವನ್ನು ವೀಕ್ಷಿಸಿ ಅಗತ್ಯ ಮಾರ್ಗದರ್ಶನ ನೀಡಿದರು.
ಡಿವೈಎಸ್ಪಿ ಮೋಹನ್, ಇನ್‌ಸ್ಪೆಕ್ಟರ್ ಆನಂದ್‌ಕುಮಾರ್, ಸಬ್ ಇನ್‌ಸ್ಪೆಕ್ಟರ್ ಸಾಹೇಬಗೌಡ, ರವಿ ಇತರರಿದ್ದರು.