ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡಿ Workshop

ಗುಬ್ಬಿ ತಾಪಂ ಸಭಾಂಗಣದಲ್ಲಿ Workshop ಹಮ್ಮಿಕೊಂಡಿದ್ದ ತರಬೇತಿ ಕಾರ್ಯಗಾರದಲ್ಲಿ ವಿಷಯ ನಿರ್ವಹಕ ವಿಜಯ್​ ಕುಮಾರ್​, ತಾಲೂಕು ಐಇಸಿ ಸಂಯೋಜಕ ರಾಘವೇಂದ್ರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಪಂ ಸಿಬ್ಬಂದಿ ಇದ್ದರು.
ಗುಬ್ಬಿ ತಾಪಂ ಸಭಾಂಗಣದಲ್ಲಿ Workshop ಹಮ್ಮಿಕೊಂಡಿದ್ದ ತರಬೇತಿ ಕಾರ್ಯಗಾರದಲ್ಲಿ ವಿಷಯ ನಿರ್ವಹಕ ವಿಜಯ್​ ಕುಮಾರ್​, ತಾಲೂಕು ಐಇಸಿ ಸಂಯೋಜಕ ರಾಘವೇಂದ್ರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಪಂ ಸಿಬ್ಬಂದಿ ಇದ್ದರು.
Published on

ಗುಬ್ಬಿ:

ಗ್ರಾಮ ಪಂಚಾಯಿತಿಗಳ ಮೂಲದಲ್ಲಿಯೇ ನಾಲ್ಕು ವಿಧದ ತ್ಯಾಜ್ಯ ವಿಂಗಡಣೆ ಮಾಡಿ,

Workshop

ಸಂಗ್ರಹಣೆ, ಸಾಗಾಣಿಕೆ ಸಂಸ್ಕರಣೆ ಹಾಗೂ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಾಲೂಕು ಯೋಜನಾಧಿಕಾರಿ ಎಂ.ಜೆ.ಜಗನ್ನಾಥಗೌಡ ತಿಳಿಸಿದರು.

ತಾಪಂ ಸಭಾಂಗಣದಲ್ಲಿ ಹೊಸ ಘನ ತ್ಯಾಜ್ಯ ನಿರ್ವಹಣಾ ನಿಯಮಗಳ ಅನುಷ್ಠಾನ ಮಾಡುವ ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿ, ಗ್ರಾಪಂ ಮಟ್ಟದಲ್ಲಿ ಘನ ತ್ಯಾಜ್ಯವನ್ನು ಹಸಿ ತ್ಯಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಹಾಗೂ ಸ್ಪೆಷಲ್​ ಕೇರ್​ ತ್ಯಾಜ್ಯಗಳಾಗಿ ವಿಂಗಡಿಸಿ ತ್ಯಾಜ್ಯ ಸಂಗ್ರಹಣೆ ಗಾಡಿಯಲ್ಲಿ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರು
ಸಂಪನ್ಮೂಲ ವ್ಯಕ್ತಿ ಸುಬ್ಬರಾಜ್​ ಅರಸ್​ ಮಾತನಾಡಿ, ಘನತ್ಯಾಜ್ಯ ವಸ್ತುಗಳ ನಿರ್ವಹಣೆ ನಿಯಮಗಳು 2026ರನ್ನು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಿಗದಿತ ಕಾಲಾವಧಿಯಲ್ಲಿ ಅನುಷ್ಠಾನಗೊಳಿಸುವ ಕುರಿತು ಸವೋರ್ಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ನಿಯಮವನ್ನು ಪಂಚಾಯಿತಿಯಲ್ಲಿ ಕಡ್ಡಾಯವಾಗಿ ಪಾಲಿಸುವ ಮೂಲಕ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ತಿಳಿಸಿದರು.
ಜಿಲ್ಲಾ ಎಂಐಎಸ್​ ಸಮಾಲೋಚಕಿ ಇ.ವಿನುತಾ ಮಾತನಾಡಿ, ಗ್ರಾಪಂಗಳು ತಮ್ಮ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ಸಂಗ್ರಹಿಸಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಈ ಉದ್ದೇಶಕ್ಕಾಗಿ ಪ್ರತಿ ಐದು ಚದರ ಕಿಮೀ ವ್ಯಾಪ್ತಿಗೆ ಕನಿಷ್ಠ ಒಂದು ಸಂಗ್ರಹಣ ಕೇಂದ್ರ ಸ್ಥಾಪಿಸಬೇಕು. ತ್ಯಾಜ್ಯ ಸ್ವೀಕರಿಸುವ ಸಮಯವನ್ನು ಅಧಿಕೃತವಾಗಿ ಸಾರ್ವಜನಿಕರಿಗೆ ತಿಳಿಸಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net