ಸ್ವಾತಂತ್ರೊೃೀತ್ಸವದಲ್ಲಿ ಡಾ.ಅಂಬೇಡ್ಕರ್‌ಗೆ ಅಗೌರವ

ಮದ್ದೂರು ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ದಲಿತಪರ ಸಂಘಟನೆಗಳ ಮುಖಂಡರು ಶಿರಸ್ತೇದಾರ್ ರಾಘವೇಂದ್ರಗೆ ಮನವಿ ಸಲ್ಲಿಸಿದರು. ಕರಡಕರೆ ಯೋಗೇಶ್, ರವಿಕುಮಾರ್, ಸಿ.ಎ.ಕೆರೆ ಮೂರ್ತಿ, ಸುರೇಶ್, ಶಿವಲಿಂಗಯ್ಯ, ಮರಿದೇವರು ಇತರರು ಇದ್ದರು.

Published on

ಮದ್ದೂರು:

ತಾಲೂಕಿನ ಆತಗೂರು ಹೋಬಳಿಯ ತೂಬಿನಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಆ.15ರಂದು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಭಾವಚಿತ್ರವಿಡದೆ ಅವಮಾನಿಸಲಾಗಿದೆ ಎಂದು ಆರೋಪಿಸಿ ದಲಿತಪರ ಸಂಘಟನೆಗಳ ಒಕ್ಕೂಟದಿಂದ ತಾಲೂಕು ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ದಲಿತ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕರಡಕೆರೆ ಯೋಗೇಶ್ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯಲ್ಲಿ ಡಾ.ಅಂಬೇಡ್ಕರ್ ಅವರ ಭಾವಚಿತ್ರವಿಡುವಂತೆ ಸರ್ಕಾರದ ಆದೇಶವಿದೆ. ಆದರೆ ಶಾಲೆಯ ಮುಖ್ಯಶಿಕ್ಷಕರು ಹಾಗೂ ಸಹ ಶಿಕ್ಷಕರು ಅಂಬೇಡ್ಕರ್ ಅವರ ಭಾವಚಿತ್ರವಿಡದೆ ಅವಮಾನ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಳಿಕ ಈ ಸಂಬಂಧ ಶಿರಸ್ತೇದಾರ್ ರಾಘವೇಂದ್ರಗೆ ಮನವಿ ಸಲ್ಲಿಸಲಾಯಿತು.
ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಗ್ರಾಪಂ ಮಾಜಿ ಅಧ್ಯಕ್ಷ ತೂಬಿನಕೆರೆ ಸುರೇಶ್, ಮುಖಂಡರಾದ ಸಿ.ಎ.ಕೆರೆ ಮೂರ್ತಿ, ಶಿವಲಿಂಗಯ್ಯ, ಮರಿದೇವರು, ಮೋಹನ್, ಧನಂಜಯ, ರುದ್ರೇಶ್, ಭವಿತ್‌ಕುಮಾರ್, ಲಿಂಗಯ್ಯ, ರವಿ, ವೆಂಕಟಯ್ಯ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net