ಫೌಂಡೇಷನ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ರೇವಂತ್ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಪ್ರೋತ್ಸಾಹ ನೀಡುವುದು, ಅವರಲ್ಲಿ ಆತ್ಮವಿಶ್ವಾಸ ಮತ್ತು ಕಲಿಕೆಯ ಆಸಕ್ತಿ ಬೆಳೆಸುವುದು ಕಾರ್ಯಕ್ರಮ ಉದ್ದೇಶ. ಶಿಕ್ಷಣವೇ ರಾಷ್ಟ್ರ ನಿರ್ಮಾಣದ ಮೂಲ ಶಕ್ತಿ ಎಂಬ ನಂಬಿಕೆಯಿಂದ ಪ್ರತಿ ಮಗುವಿಗೂ ಸಮಾನ ಅವಕಾಶ ದೊರಕಬೇಕು ಎಂಬ ಸಂಕಲ್ಪದೊಂದಿಗೆ ಈ ಸೇವಾ ಕಾರ್ಯ ಕೈಗೊಳ್ಳಲಾಗಿದೆ ಎಂದರು.