ಪೌರಕಾರ್ಮಿಕರಿಗೆ ಸುರಕ್ಷಾ ಕಿಟ್ ವಿತರಣೆ

ಶಾಸಕ ಡಾ. ಮಂತರ್ ಗೌಡ ಕುಶಾಲನಗರದಲ್ಲಿ ಪೌರಕಾರ್ಮಿಕರಿಗೆ ಸ್ವಚ್ಛತಾ ಕಿಟ್‌ಗಳನ್ನು ವಿತರಿಸಿದರು. ವಿ.ಪಿ. ಶಶಿಧರ್, ಮಂಜುನಾಥ ಗುಂಡೂರಾವ್, ಗಿರೀಶ್ ಮತ್ತಿತರರು ಇದ್ದರು.
ಶಾಸಕ ಡಾ. ಮಂತರ್ ಗೌಡ ಕುಶಾಲನಗರದಲ್ಲಿ ಪೌರಕಾರ್ಮಿಕರಿಗೆ ಸ್ವಚ್ಛತಾ ಕಿಟ್‌ಗಳನ್ನು ವಿತರಿಸಿದರು. ವಿ.ಪಿ. ಶಶಿಧರ್, ಮಂಜುನಾಥ ಗುಂಡೂರಾವ್, ಗಿರೀಶ್ ಮತ್ತಿತರರು ಇದ್ದರು.
Published on
ಕುಶಾಲನಗರ: ಪಟ್ಟಣದ ಸ್ವಚ್ಛತೆಗಾಗಿ ಶ್ರಮಿಸುತ್ತಿರುವ ಪೌರಕಾರ್ಮಿಕರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮಂಗಳವಾರ ಪೌರಕಾರ್ಮಿಕರಿಗೆ ಸುರಕ್ಷಾ ಕಿಟ್ ವಿತರಿಸಿದರು.
ಇಲ್ಲಿನ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಗ್ಲೌಸ್, ಮಾಸ್ಕ್, ಗಂಬೂಟ್ಸ್, ಸ್ಯಾನಿಟೈಸರ್, ಸೋಪ್ ಹಾಗೂ ರೇನ್‌ಕೋಟ್ ಒಳಗೊಂಡ ಕಿಟ್‌ಗಳನ್ನು ವಿತರಿಸಲಾಯಿತು.
ಈ ವೇಳೆ ಮಾತನಾಡಿದ ಮಂತರ್ ಗೌಡ, ಪೌರಕಾರ್ಮಿಕರು ನಮ್ಮ ನಗರದ ನೈಜ ಶಿಲ್ಪಿಗಳು. ಚರಂಡಿ, ಕಸ, ತ್ಯಾಜ್ಯ ಸ್ವಚ್ಛಗೊಳಿಸುವಾಗ ಅವರ ಆರೋಗ್ಯಕ್ಕೆ ಧಕ್ಕೆ ಆಗಬಾರದು. ಹಾಗಾಗಿ ಪ್ರತಿಯೊಬ್ಬರಿಗೂ ಸುರಕ್ಷತಾ ಪರಿಕರಗಳನ್ನು ನೀಡಲಾಗುತ್ತಿದೆ. ಇದನ್ನು ಕಡ್ಡಾಯವಾಗಿ ಬಳಸಬೇಕು ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್, ಕೆ.ಪಿ. ಚಂದ್ರಕಲಾ, ವಿ.ಎಸ್. ಆನಂದ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಗಿರೀಶ್ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net