ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಇದೂವರೆಗೆ ಬಿ.ಎಲ್.ಓ ಗಳು ಮನೆ-ಮನೆಗೆ ಹೋಗಿ ಒಟ್ಟು 23,71,542 ಮತದಾರರ ಪೈಕಿ 23,35,062 (ಶೇ.98.46)ರಷ್ಟು ಗಣತಿ ನಮೂನೆ ವಿತರಣೆ ಮಾಡಿದ್ದಾರೆ. ಅಲ್ಲದೆ 6,86,812 (ಶೇ.28.96) ಮತದಾರರಿಂದ ಭರ್ತಿ ಮಾಡಿದ ಗಣತಿ ನಮೂನೆ ಪಡೆದು ಮೊಬೈಲ್ ತಂತ್ರಾಂಶದಲ್ಲಿ ಡಿಜಿಟೈಸ್ ಮಾಡಿದ್ದಾರೆ. ಇನ್ನು 5,585 (ಶೇ.0.24) ಮತದಾರರು ಸ್ವಯಂ ಪ್ರೇರಿತವಾಗಿ ಆನ್ ಲೈನ್ ಮೂಲಕ ಗಣತಿ ನಮೂನೆ ಸಲ್ಲಿಸಿದ್ದಾರೆ. ಬಿ.ಎಲ್.ಓ. ಗಳು ಮನೆ-ಮನೆ ಭೇಟಿ ಕೊಟ್ಟಾಗ ಇಲ್ಲಿಯವರೆಗೆ 6,156 ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿರುವುದು ಮತ್ತು 6,924 ಜನ ಮತದಾರರು ನಿಧನ ಹೊಂದಿರುವ ಬಗ್ಗೆ ವರದಿಯಾಗಿದೆ ಎಂದು ರಾಜಕೀಯ ಪಕ್ಷಗಳ ಗಮನಕ್ಕೆ ತಂದರು.