ಮತಕಳ್ಳತನದ ವಿರುದ್ಧ ಪ್ರತಿಭಟನೆ ಮುನ್ನ ದೆಹಲಿಯಲ್ಲಿ ಸೋನಿಯಾ, ರಾಹುಲ್ ಭೇಟಿ ಮಾಡಿದ ಡಿಕೆಶಿ!

DK Shivakumar
DK Shivakumar
Published on
ನವದೆಹಲಿ: ರಾಜ್ಯದಲ್ಲಿ ದಿನೇದಿನೆ ಅಧಿಕಾರ ಹಂಚಿಕೆ ವಿಚಾರ ತಾರಕಕ್ಕೇರುತ್ತಿದೆ. ಇದರ ನಡುವೆ ಡಿಸಿಎಂ ಡಿಕೆ ಶಿವಕುಮಾರ್​ ಶನಿವಾರ ದೆಹಲಿಗೆ ತೆರಳಿದ್ದು, ಕೂತುಹಲ ಮೂಡಿಸಿದೆ.
ಹೌದು, ಮತಕಳ್ಳತನದ ವಿರುದ್ಧ ಭಾನುವಾರ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್ ಪ್ರತಿಭಟನೆಗೂ ಮುನ್ನ ದೆಹಲಿಯ ಎಐಸಿಸಿ ಕಚೇರಿ ಇಂದಿರಾ ಭವನ್​ನಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.
ಪ್ರತಿಭಟನೆಗೂ ಮುನ್ನ ಉಪಹಾರ ಕೂಟಕ್ಕೆ ತೆರಳಿದ ಡಿಕೆ ಶಿವಕುಮಾರ್​, ಉಪಹಾರ ಸೇವನೆ ಮಾಡುತ್ತಿದ್ದ ಕಾಂಗ್ರೆಸ್​ ಹೈಕಮಾಂಡ್​ ನಾಯಕರನ್ನು ಭೇಟಿ ಮಾಡಿರೋದು ರಾಜಕೀಯ ವಲಯಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಇಂದು ಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಉಪಹಾರ ಕೂಟ ನಡೆಸಿದರು.ಸಚಿವರಾದ ಆರ್ ಬಿ ತಿಮ್ಮಾಪುರ, ಮಾಂಕಾಳ ವೈದ್ಯ, ಮಾಜಿ ಸಚಿವ ತನ್ವಿರ್ ಸೇಠ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಆನೇಕಲ್ ಶಿವಣ್ಣ, ಎ ಸಿ ಶ್ರೀನಿವಾಸ್, ಪ್ರದೀಪ್ ಈಶ್ವರ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಮ್ ಅಹ್ಮದ್, ಎಂಎಲ್ಸಿಗಳಾದ ಪುಟ್ಟಣ್ಣ, ಮಂಜುನಾಥ್ ಭಂಡಾರಿ, ವಸಂತಕುಮಾರ್, ಬಸನಗೌಡ ಬಾದರ್ಲಿ, ಶ್ರೀನಿವಾಸ್, ಮಾಜಿ ಎಂಎಲ್ಸಿ ಯು ಬಿ ವೆಂಕಟೇಶ್ ಮತ್ತಿತರರು ಡಿಸಿಎಂ ಉಪಹಾರ ಕೂಟದಲ್ಲಿ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net