ನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನಲ್ಲಿ ಟೆಕ್ ಸಮ್ಮಿಟ್ ನಡೆಯುತ್ತಿರುವ ಬಗ್ಗೆ ಕೇಳಿದಾಗ "ಜಗತ್ತಿನ ನಾನಾ ದೇಶದ ನಾಯಕರುಗಳು ಪ್ರತಿದಿನ ನನ್ನನ್ನು ಭೇಟಿ ಮಾಡುತ್ತಿರುತ್ತಾರೆ. ಅನೇಕರು ಬೆಂಗಳೂರಿನಲ್ಲಿ ಉದ್ದಿಮೆ ಆರಂಭಕ್ಕೆ ಉತ್ಸುಕರಾಗಿದ್ದಾರೆ. ನಾವು ಎಷ್ಟು ಸಾಧ್ಯವೋ ಅಷ್ಟು ಅವರೆಲ್ಲರ ಬೆಂಬಲಕ್ಕೆ ನಿಂತಿದ್ದೇವೆ. 60 ದೇಶಗಳ ಪ್ರತಿನಿಧಿಗಳು, ದೇಶದ ಎಲ್ಲಾ ರಾಜ್ಯಗಳ ಪ್ರಮುಖರು ಸುಮಾರು 50 ಸಾವಿರ ಮಂದಿ ಇದರಲ್ಲಿ ಭಾಗವಹಿಸಲಿದ್ದಾರೆ. 1,500 ದೊಡ್ದ ಕಂಪೆನಿಗಳು ಭಾಗವಹಿಸುತ್ತಿವೆ. ಇವರುಗಳು ಉದ್ಯೋಗ ನೀಡಬೇಕು, ಸಂಪಾದನೆ ಮಾಡಬೇಕು. ಅದಕ್ಕೆ ನಮ್ಮ ಪ್ರೋತ್ಸಾಹ" ಎಂದರು.