ಅವರದ್ದು ಏನಿದ್ದರೂ ಖಾಲಿ ಮಾತು. ಇಲ್ಲಿನ ಅಕ್ಕಿಗೆ, ಇಲ್ಲಿನ ಅರಿಷಿನ ಸೇರಿಸಿ ಇದು ಅಯೋಧ್ಯೇಯಿಂದ ಬಂದಿರುವ ಅಕ್ಷತೆ ಎಂದು ಹಂಚಿದವರು ಅವರು. ಅದೇ ರೀತಿ ಈಗ ಬಿಜೆಪಿಯವರು ಗ್ಯಾಸ್ ಸಿಲಿಂಡರ್ ಅನ್ನು ಮನೆ ಬಾಗಿಲಿಗೆ ತೆಗೆದುಕೊಂಡು ಹೋಗಿ ಹಂಚಲಿ. ಪೆಟ್ರೋಲ್ ಬಂಕ್ ಗಳಲ್ಲಿ ಉಜ್ವಲ ಯೋಜನೆ ಬಗ್ಗೆ ಮೋದಿ ಅವರ ಫೋಟೋ ಇರುವ ಜಾಹಿರಾತು ಈಗ ಏನಾಯ್ತು? ಕೇವಲ ಮಾತನಾಡಿದರೆ ಏನೂ ಸುಖವಿಲ್ಲ. ಅವರು ಜನರ ಬಳಿ ಮತ ಕೇಳುವ ಎಲ್ಲಾ ಅರ್ಹತೆ ಕಳೆದುಕೊಂಡಿದ್ದಾರೆ. ಈ ಸರ್ಕಾರ ಸುಭದ್ರವಾಗಿದ್ದು, ಬಲಿಷ್ಠವಾಗಿದೆ. 2028ರಲ್ಲೂ ಜನ ನಮಗೆ ಆಶೀರ್ವಾದ ಮಾಡಲಿದ್ದಾರೆ ಎಂದು ತಿಳಿಸಿದರು.