ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಕುಂಭಮೇಳಕ್ಕೂ ತೆರಳಿದ್ದ ಈಶ್ವರಪ್ಪ, ತ್ರಿವೇಣಿ ಸಂಗಮದಲ್ಲಿ ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರವನ್ನು ಹಿಡಿದು, ಮುಖ್ಯಮಂತ್ರಿಯಾಗುವ ಭಾಗ್ಯ ಕರುಣಿಸು ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ನಂತರ ಆದಿಚುಂಚನಗಿರಿಯ ಕಾಲಭೈರವೇಶ್ವರನಲ್ಲೂ ಪ್ರಾರ್ಥಿಸಿದ್ದರು. ಪ್ರಾರ್ಥನೆಗಳು ಮೂರು ವರ್ಷದ ಬಳಿಕ ಫಲಿಸಿವೆ. ಹಲವು ಸವಾಲುಗಳನ್ನು ಮೆಟ್ಟಿ ನಮ್ಮ ಸಾಹೇಬರು ಕೊನೆಗೂ ಮುಖ್ಯಮಂತ್ರಿ ಹುದ್ದೆ ಏರಲಿದ್ದಾರೆ. ಅವರ ಪದಗ್ರಹಣಕ್ಕೆ ಕ್ಷಣಗಣನೆ ಶುರುವಾಗಿದೆ. ನನಗೆ ಇದಕ್ಕಿಂತ ದೊಡ್ಡ ಸಂಭ್ರಮ ಮತ್ತೊಂದಿಲ್ಲ. ನನ್ನ ಜೀವಮಾನದ ಅತಿ ಖುಷಿಯ ಕ್ಷಣ ಎಂದು ಈಶ್ವರಪ್ಪ ಸಂತಸ ವ್ಯಕ್ತಪಡಿಸಿದರು.