ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಮೇ.28ರಂದು ರಾಜೀನಾಮೆ ನೀಡಿದ್ದಾರೆ. ಇಂದು (ಮೇ.30) ಸಂಜೆ ನಡೆಯುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ನೂತನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಈಗಾಗಲೇ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಅವರೊಂದಿಗೆ 12ರಿಂದ 14 ಸಚಿವರು ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ, (ಏಜೆನ್ಸೀಸ್).