ದಿ ಭಾರತ್ ಸ್ಕೌಟ್ಸ್-ಗೈಡ್ಸ್‌ಗೆ ಡಿಕೆಶಿ ನೂತನ ಅಧ್ಯಕ್ಷ- D K Shivakumar
ಸಿಎಂ ಡಿ.ಕೆ. ಶಿವಕುಮಾರ್
Published on:
Copied
Follow Us
ಬೆಂಗಳೂರು: ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕರ್ನಾಟಕ ರಾಜ್ಯ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಸಿಎಂ ಡಿ.ಕೆ. ಶಿವಕುಮಾರ್ ಪದಗ್ರಹಣ ಸ್ವೀಕರಿಸಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಜಾಜಿನಗರದ ವಿದ್ಯಾವರ್ಧಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ದಿನಗಳಲ್ಲಿ ಸ್ಕೌಟ್ ಆಗಿ ಪಾಲ್ಗೊಂಡಿದ್ದ ಬಗ್ಗೆ ಅನುಭವ ಹಂಚಿಕೊಂಡರು.
ಸ್ಕೌಟ್ಸ್ ಮತ್ತು ಗೈಡ್ಸ್ ಚಳವಳಿಯನ್ನು ಇನ್ನಷ್ಟು ಬಲಪಡಿಸಲು ಸರ್ಕಾರದಿಂದ ಸಂಪೂರ್ಣ ಬೆಂಬಲ, ಸಹಕಾರ ನೀಡುವುದಾಗಿ ಸಿಎಂ ಭರವಸೆ ನೀಡಿದರು. 2027ರಲ್ಲಿ ‘ಅಂತಾರಾಷ್ಟ್ರೀಯ ಸ್ಕೌಟ್ಸ್-ಗೈಡ್ಸ್ ಜಾಂಬೂರಿ’ ಆಯೋಜಿಸುವ ಪ್ರಸ್ತಾವನೆಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ಉಪಾಧ್ಯಕ್ಷ ಕೊಂಡಜ್ಜಿ ಬ. ಷಣ್ಮುಖಪ್ಪ, ಸಿಎಂ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಮತ್ತಿತರರಿದ್ದರು.