ಕೋಲಾರ: ನಗರ ಹೊರವಲಯದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಮಾರ್ಣವಾಗುತ್ತಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 21 ಅಡಿ ಎತ್ತರದ ಕಂಚಿನ ಪ್ರತಿಮೆ ಕಾಮಗಾರಿಯನ್ನು ಶಾಸಕ ಕೊತ್ತೂರು ಜಿ. ಮಂಜುನಾಥ್ ಹಾಗೂ ಎಂಎಲ್ಸಿ ಎಂ.ಎಲ್. ಅನಿಲ್ ಕುಮಾರ್ ಪರಿಶೀಲಿಸಿದರು.
ಪ್ರತಿಮೆ ನಿಮಾರ್ಣ ಕಾಮಗಾರಿಯ ಪ್ರಗತಿ ಹಾಗೂ ಗುಣಮಟ್ಟವನ್ನು ಪರಿಶೀಲಿಸಿದ ಅವರು, ಕಾಮಗಾರಿಯಲ್ಲಿ ಯಾವುದೇ ರೀತಿಯ ಲೋಪ ಅಥವಾ ರ್ನಿಲಕ್ಷ$್ಯಕ್ಕೆ ಅವಕಾಶ ನೀಡಬಾರದು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಅಂಬೇಡ್ಕರ್ ಅವರ ಪ್ರತಿಮೆ ಜಿಲ್ಲೆಯ ಗೌರವದ ಪ್ರತಿಕವಾಗಲಿದ್ದು, ಗುಣಮಟ್ಟದ ಸಾಮಗ್ರಿಗಳನ್ನು ಬಳಸಿ ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಶಾಸಕರು ಸೂಚಿಸಿದರು.
ಹಿರಿಯ ಕಾಂಗ್ರೆಸ್ ಮುಖಂಡ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಜಮ್ಮನಹಳ್ಲಿ ಕೃಷ್ಣಪ್ಪ, ಭರತ್, ಸೇರಿದಂತೆ ಅಧಿಕಾರಿಗಳು, ಗುತ್ತಿಗೆದಾರ ಇದ್ದರು.