ಖಾಸಗಿ ಕಂಪನಿ ಸಲ್ಲಿಸಿರುವ ಅರ್ಜಿಗೆ ಮಾನ್ಯತೆ ನೀಡದಿರಿ

 ಕೊಳ್ಳೇಗಾಲದಲ್ಲಿರುವ ಸೆಸ್ಕ್ ಉಪ ವಿಭಾಗ ಕಚೇರಿ ಮುಂಭಾಗ ಸೆಸ್ಕ್ ಅಧಿಕಾರಿಗಳು ಮತ್ತು ನೌಕರರು ಪ್ರತಿಭಟನೆ ನಡೆಸಿದರು.
ಕೊಳ್ಳೇಗಾಲದಲ್ಲಿರುವ ಸೆಸ್ಕ್ ಉಪ ವಿಭಾಗ ಕಚೇರಿ ಮುಂಭಾಗ ಸೆಸ್ಕ್ ಅಧಿಕಾರಿಗಳು ಮತ್ತು ನೌಕರರು ಪ್ರತಿಭಟನೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯದಲ್ಲಿ ವಿದ್ಯುತ್ ವಿತರಣಾ ಚಟುವಟಿಕೆ ಆರಂಭಿಸಲು
  • ಖಾಸಗಿ ಕಂಪನಿ ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಅರ್ಜಿ
ಕೊಳ್ಳೇಗಾಲ: ರಾಜ್ಯದಲ್ಲಿ ವಿದ್ಯುತ್ ವಿತರಣಾ ಚಟುವಟಿಕೆ ಆರಂಭಿಸಲು ಖಾಸಗಿ ಕಂಪನಿ ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದು, ಇದಕ್ಕೆ ಮಾನ್ಯತೆ ನೀಡಬಾರದು ಎಂದು ಆಗ್ರಹಿಸಿ ಕೊಳ್ಳೇಗಾಲ ಉಪವಿಭಾಗದ ಅಧಿಕಾರಿಗಳು ಮತ್ತು ನೌಕರರು ಪ್ರತಿಭಟನೆ ನಡೆಸಿದರು.
ಪಟ್ಟಣದಲ್ಲಿರುವ ಸೆಸ್ಕ್ ಉಪ ವಿಭಾಗ ಕಚೇರಿ ಮುಂಭಾಗ ಜಮಾಯಿಸಿದ್ದ ಪ್ರತಿಭಟನಾಕಾರರು, ಸರ್ಕಾರವು ವಿದ್ಯುತ್ ವಿತರಣಾ ಕ್ಷೇತ್ರವನ್ನು ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿದರು.
ಸೆಸ್ಕ್ ಇಇ ತಬಸ್ಸುಮ್ ಅಪ್ಜಾ ಬಾನು ಮಾತನಾಡಿ, ವಿದ್ಯುತ್ ವಿತರಣಾ ಸಂಸ್ಥೆಗಳನ್ನು ಬಲಪಡಿಸುವ ಬದಲು ಖಾಸಗಿ ಕಂಪನಿಗಳಿಗೆ ಅವಕಾಶ ನೀಡುವುದು ಸರಿಯಲ್ಲ. ಈಗಾಗಲೇ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲಾಗುತ್ತಿದ್ದು, ಸರ್ಕಾರಿ ಸಂಸ್ಥೆಗಳ ಅಸ್ತಿತ್ವಕ್ಕೆ ಇದು ಧಕ್ಕೆ ಉಂಟು ಮಾಡಬಹುದು ಎಂದು ಆತಂಕ ವ್ಯಕ್ತಪಡಿಸಿದರು.
ಸೆಸ್ಕ್‌ನ ಕೊಳ್ಳೇಗಾಲ ಉಪವಿಭಾಗದ ಎಇಇ ಸುರೇಶ್ ಕುಮಾರ್, ಯಳಂದೂರು ಎಇಇ ಲಿಂಗರಾಜು, ಹನೂರು ರಂಗಸ್ವಾಮಿ, ವಿಭಾಗೀಯ ಕಚೇರಿ ಎಇಇ ಶ್ರೀನಿಧಿ, ಕೆ.ಮಹದೇವ, ಎನ್.ಮಹೇಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net