ಯಾದಗಿರಿ: ಕೇಂದ್ರ ಸರ್ಕಾರದ ಜ್ಞಾನ ಭಾರತಂ ಮಿಷನ್ ಯೋಜನೆಯಡಿ ರಾಷ್ಟ್ರಾದಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯ, ಹಸ್ತಪ್ರತಿ ಮತ್ತು ದಾಖಲೆಗಳು ಇಂದಿನ ತಂತ್ರಾಜ್ಞಾನ ಮೂಲಕ ಶಾಶ್ವತವಾಗಿ ಉಳಿಸುವುದಕ್ಕಾಗಿ ಸಮೀಕ್ಷೆ, ಸಂರಕ್ಷಣೆ, ರಕ್ಷಣೆ, ಡಿಜಿಟಲೀಕರಣ, ನೋಂದಣಿ ಮತ್ತು ವಿಮರ್ಶಾತ್ಮಕ ಸಂಪಾದಿಸುವ ಕಾರ್ಯ ಆರಂಭಗೊಳ್ಳಲಿದೆ ಎಂದು ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ ಹೇಳಿದರು.