ದೊಡ್ಡಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ದೊಡ್ಡ ಸೇತುವೆ ಕಾಮಗಾರಿಯನ್ನು ಶುಕ್ರವಾರ ಶಾಸಕ ಎ.ವೀಕ್ಷಿಸಿದರು. ರಾಜು, ಲಕ್ಷ್ಮೀ ಇತರರಿದ್ದರು.
ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ದೊಡ್ಡ ಸೇತುವೆ ಕಾಮಗಾರಿಯನ್ನು ಶುಕ್ರವಾರ ಶಾಸಕ ಎ.ವೀಕ್ಷಿಸಿದರು. ರಾಜು, ಲಕ್ಷ್ಮೀ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರಾಮನಾಥಪುರ ದೊಡ್ಡಸೇತುವೆ ಕಾಮಗಾರಿ
  • ಶಾಸಕ ಎ.ಮಂಜು
ಅರಕಲಗೂಡು: ತಾಲೂಕಿನ ರಾಮನಾಥಪುರ ದೊಡ್ಡಸೇತುವೆ ಕಾಮಗಾರಿಯನ್ನು ಬೇಗ ಪೂರ್ಣಗೊಳಿಸುವಂತೆ ಶಾಸಕ ಎ.ಮಂಜು ಇಂಜಿನಿಯರ್‌ಗೆ ತಾಕೀತು ಮಾಡಿದರು.
ರಾಮನಾಥಪುರದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ದೊಡ್ಡ ಸೇತುವೆ ಕಾಮಗಾರಿಯನ್ನು ಶುಕ್ರವಾರ ವೀಕ್ಷಿಸಿ ಮಾತನಾಡಿದ ಅವರು, ಕಾಮಗಾರಿ ಮಂದಗತಿಯಲ್ಲಿ ಸಾಗಿರುವ ಪರಿಣಾಮ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಇನ್ನೊಂದು ತಿಂಗಳಲ್ಲಿ ಕಾಮಗಾರಿ ಮುಗಿಸದಿದ್ದರೆ ಸದನದಲ್ಲಿ ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ಎಚ್ಚರಿಸಿದರು.
ಕೆಆರ್‌ಡಿಸಿಎಲ್ ಕಾರ್ಯಪಾಲಕ ಇಂಜಿನಿಯರ್ ರಾಜು, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಲಕ್ಷ್ಮೀ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net