ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ: ಡಾ. ಟಿ. ನವೀನ್

Blood donation awarness programme
Blood donation awarness programme
Published on

ಪ್ರಮುಖ ಮುಖ್ಯಾಂಶಗಳು

  • * ಬಾಲ್ಯದ ಕ್ಯಾನ್ಸರ್ ರೋಗಿಗಳಿಗಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ
ಬೆಂಗಳೂರು ಕ್ಯಾನ್ಸರ್ ರೋಗಿಗಳ ಪಾಲಿಗೆ ಸಂಜೀವಿನಿ ಆಗಿರುವ ಕಿದ್ವಾಯಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಪಡುವ ರೋಗಿಗಳಿಗೆ ರಕ್ತದ ಅವಶ್ಯಕತೆ ಇದ್ದು, ಈ ಸಂಬಂಧ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸ್ವಯಂಪ್ರೇರಿತರಾಗಿ ರಕ್ತ ಮತ್ತು ಪ್ಲೇಟ್‌ಲೆಟ್ ದಾನ ಮಾಡಬೇಕು ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ನಿದೇರ್ಶಕ ಡಾ. ಟಿ. ನವೀನ್ ಕರೆ ನೀಡಿದರು.
ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ‘ಹರಿವು 2026’ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಬಾಲ್ಯದ ಕ್ಯಾನ್ಸರ್ ರೋಗಿಗಳಿಗಾಗಿ ಸ್ವಯಂಪ್ರೇರಿತ ರಕ್ತದಾನ ಹಾಗೂ ಸಿಂಗಲ್ ಡೋನರ್ ಪ್ಲೇಟ್‌ಲೆಟ್ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜನರು ರಕ್ತದಾನ ಮಾಡುವ ಮೂಲಕ ರೋಗಿಗಳಿಗೆ ಆಸರೆಯಾಗಬೇಕು ಎಂದ ಅವರು, ಯುವ ಸಮೂಹಕ್ಕೆ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು ಶಾಲಾ - ಕಾಲೇಜುಗಳು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಅಭಿಯಾನ ಕೈಗೊಳ್ಳಲಾಗುತ್ತಿದೆ. ಕಿದ್ವಾಯಿ ಸಂಸ್ಥೆಯಲ್ಲಿ ಉತ್ತಮ ಚಿಕಿತ್ಸಾ ಸೌಲಭ್ಯವಿದ್ದು, ದಾಖಲಾದ ರೋಗಿಗಳಿಗೆ ಚಿಕಿತ್ಸೆಗೆ ಮೊದಲ ಆದ್ಯತೆ ನೀಡುವುದರ ಜತೆಗೆ ಗುಣಮಟ್ಟ ಕಾಯ್ದುಕೊಳ್ಳಲಾಗುತ್ತಿದೆ ಎಂದರು.
ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಮಕ್ಕಳ ಗಂಥಿ ವಿಭಾಗ ಹಾಗೂ ಕ್ಯಾನ್‌ಕಿಡ್ಸ್ ಕ್ಯಾನ್ ಸಂಸ್ಥೆಯ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಮಕ್ಕಳ ಗಂಥಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಅರುಣ್ ಕುಮಾರ್, ವಿವಿಧ ವಿಭಾಗಗಳ ವೈದ್ಯರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net