ಶಾಲೆ ಅಭಿವೃದ್ಧಿಗೆ ದಾನಿಗಳು ಸಹಕರಿಸಲಿ

ಸ್ವಾತಂತ್ರೃ ದಿನ ಆಚರಣೆ ಸಂಬಂಧ ಸರಗೂರು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.
ಸ್ವಾತಂತ್ರೃ ದಿನ ಆಚರಣೆ ಸಂಬಂಧ ಸರಗೂರು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ಸ್‌ಡಿಎಂಸಿ ಅಧ್ಯಕ್ಷ ಎಸ್.ಡಿ.ಸಣ್ಣಸ್ವಾಮಿ
  • ರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ

ಸರಗೂರು:

ಈ ಬಾರಿ ಸ್ವಾತಂತ್ರೃ ದಿನವನ್ನು ಅರ್ಥಪೂರ್ಣ ಹಾಗೂ ವೈಭವದಿಂದ ಆಚರಿಸಬೇಕಿದ್ದು, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದು ಎಸ್‌ಡಿಎಂಸಿ ಅಧ್ಯಕ್ಷ ಎಸ್.ಡಿ.ಸಣ್ಣಸ್ವಾಮಿ ಹೇಳಿದರು.

ಸ್ವಾತಂತ್ರೃ ದಿನದ ಸಂಬಂಧ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಶಾಲೆಯ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಸೌಕರ್ಯಗಳನ್ನು ಒದಗಿಸಲು ದಾನಿಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಮುಖ್ಯಶಿಕ್ಷಕ ನಿಂಗರಾಜ್ ಮಾತನಾಡಿ, ಮಕ್ಕಳಿಗೆ ಕಲಿಕಾ ಸಾಮಗ್ರಿ ಹಾಗೂ ಪೀಠೋಪಕರಣ ಅವಶ್ಯಕತೆ ಇದೆ. ಪಾಲಕರು ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿರಂತರ ಗಮನಹರಿಸಬೇಕು. ಶಾಲೆಯಲ್ಲಿ ಏನು ಕಲಿತಿದ್ದಾರೆ, ಪರೀಕ್ಷೆಯಲ್ಲಿ ಎಷ್ಟು ಅಂಕ ಗಳಿಸಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು. ಮನೆ ಮತ್ತು ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವುದರ ಜತೆಗೆ ಸ್ವಾತಂತ್ರೃ ದಿನ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಪಾಲಕರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಎಸ್‌ಡಿಎಂಸಿ ಉಪಾಧ್ಯಕ್ಷ ಶಿವರುದ್ರ, ಮುಖಂಡ ಇದಿಯಪ್ಪ, ಶಿಕ್ಷಕರಾದ ರಾಜು, ಶಿಕ್ಷಕಿಯರಾದ ಸವಿತಾ, ಮಮತಾ, ಶ್ವೇತಾ, ಕಲ್ಪನಾ, ಪಾಲಕರಾದ ರಾಜಮ್ಮ, ಚಿನ್ನಯ್ಯ, ಮಹೇಶ್, ಮಹದೇವಮೂರ್ತಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net