ಶಿಕ್ಷಣದಿಂದ ದೂರ ಉಳಿಯುವ ಆತಂಕ: ಕೆಪಿಎಸ್ ಶಾಲೆಗಳನ್ನು ತೆರೆಯುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಗ್ರಾಪಂಗೆ ಮಾತ್ರ ಒಂದು ಶಾಲೆಗಳನ್ನು ತೆರೆಯುವುದನ್ನು ನಾವು ವಿರೋಧಿಸುತ್ತೇವೆ. ರಾಜ್ಯದಲ್ಲಿ ಒಟ್ಟು 49,600 ಸರ್ಕಾರಿ ಶಾಲೆಗಳಿದೆ. ಆದರೆ, ಗ್ರಾಮ ಪಂಚಾಯಿತಿಗಳು ಇರುವುದು ಕೇವಲ 5,900 ಮಾತ್ರ. ಈ ನಿಯಮ ಜಾರಿಯಾದರೆ ಕೇವಲ 5,900 ಶಾಲೆಗಳು ಮಾತ್ರ ಉಳಿಯುತ್ತವೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರ ಪ್ರತಿ ಹಳ್ಳಿಗೆ ಬಸ್ ಬಿಡುತ್ತೇವೆ ಎನ್ನುತ್ತಿದೆ. ಆದರೆ, ಈಗಲೂ ಎಷ್ಟೋ ಹಳ್ಳಿಗಳಲ್ಲಿ ಬಸ್ ಇಲ್ಲದೆ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಈಗ ದೂರದ ಶಾಲೆಗಳನ್ನು ವಿಲೀನಗೊಳಿಸುವುದರಿಂದ ಬಡ ಮಕ್ಕಳು ಶಿಣದಿಂದ ದೂರ ಉಳಿಯುವ ಆತಂಕವಿದೆ ಎಂದು ಶುಭಾಷ್ ಅಸಮಾಧಾನ ವ್ಯಕ್ತಪಡಿಸಿದರು.