ತಾಲೂಕಿನ ಕೆ.ಜಿ.ಟೆಂಪಲ್ ನಾಗಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸರ್ಕಾರಿ ಅಭಿಯೋಜಕರ ಇಲಾಖೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸೈಬರ್ ಕೈಂ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಸಾಕಷ್ಟು ದೊಡ್ಡ ಮಟ್ಟದಲ್ಲಿ ಎಲ್ಲೆಡೆ ಹಬ್ಬುತ್ತಿದೆ. ಸೈಬರ್ ವಂಚಕರ ಆಮಿಷಕ್ಕೆ ಒಳಗಾಗಿ ಮೋಸ ಹೋಗುತ್ತಿದ್ದಾರೆ. ಅದರೊಂದಿಗೆ ತಮ್ಮ ಜೀವನದಲ್ಲಿ ಹಲವಾರು ಸಮಸ್ಯೆಗಳಿಗೆ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ. ಅದರಿಂದ ಕಾನೂನು ತೊಡಕುಗಳಿಗೆ ಹಾಗೂ ಮುಂದಿನ ಪೀಳಿಗೆಗೆ ದೊಡ್ಡ ಹೊಡೆತ ಬೀಳುತ್ತಿದೆ ಎಂದು ಹೇಳಿದರು.