ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಡಾ.ಅಜಯಸಿಂಗ್ ‍

Mallikarjun Kharge, the AICC President, and Dr. Ajay Singh
Mallikarjun Kharge, the AICC President, and Dr. Ajay Singh
Published on

‍ಕಲಬುರಗಿ: ನವದೆಹಲಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಡಾ.ಅಜಯ ಧರ್ಮಸಿಂಗ್ ಅವರು ಭೇಟಿ ಮಾಡಿ ಸಂಪುಟದಲ್ಲಿ ಅವಕಾಶ ಕಲ್ಪಿಸಿದಕ್ಕೆ ಕೃತಜ್ಞತೆ ಸಲ್ಲಿಸಿದರು. ಅಲ್ಲದೆ ನಿರಂತರ ಮಾರ್ಗದರ್ಶನ ಕೋರಿದರು. ಬಳಿಕ ಪಕ್ಷದ ಪ್ರಧಾನ ಸಂಘಟನಾ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ರವರು ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾಂಗ್ರೆಸ್‌ ಪಕ್ಷದ ಕರ್ನಾಟಕ ರಾಜ್ಯ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಭೇಟಿ ಮಾಡಿ ಅವರನ್ನು ಭೇಟಿ ಮಾಡಿ ಧನ್ಯವಾದಗಳನ್ನು ಅರ್ಪಿಸಿದರು.

ರಾಜ್ಯದ ಜನತೆಯ ಸೇವೆ ಮಾಡಲು ನೀಡಿರುವ ಈ ಮಹತ್ವದ ಜವಾಬ್ದಾರಿಗೆ ನಾನು ಸದಾ ಕೃತಜ್ಞನಾಗಿರುವೆ. ವರಿಷ್ಠರ ಆಶೀರ್ವಾದ ಮತ್ತು ಮಾರ್ಗದರ್ಶನದೊಂದಿಗೆ ಜನಪರ ಸೇವೆಗೆ ಸದಾ ಶ್ರಮಿಸುತ್ತೇನೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net