ರಂಜಾನ್ ಹಬ್ಬದ ಅಂಗವಾಗಿ ಜೇವರ್ಗಿ ಪಟ್ಟಣದ ಈದ್ಗಾ ಮೈದಾನದಲ್ಲಿ ಮುಸಲ್ಮಾನ್ ಬಾಂಧವರೊಡನೆ ಕೆಕೆಆರ್ಡಿಬಿ ಅಧ್ಯಕ್ಷರೂ ಆದ ಜೇವರ್ಗಿ ಶಾಸಕ ಡಾ.ಅಜಯ್ಸಿಂಗ್ ಶನಿವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಅನೇಕ ಗಣ್ಯರು ಪಾಲ್ಗೊಂಡಿದ್ದರು.
ಕಲಬುರಗಿ: ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಜೇವರ್ಗಿ ಪಟ್ಟಣದ ಈದ್ಗಾ ಮೈದಾನದಲ್ಲಿ ಮುಸಲ್ಮಾನ್ ಬಾಂಧವರೊಡನೆ ಬೆರೆತು ಕೆಕೆಆರ್ಡಿಬಿ ಅಧ್ಯಕ್ಷರೂ ಆದ ಜೇವರ್ಗಿ ಶಾಸಕ ಡಾ.ಅಜಯ್ಸಿಂಗ್ ಶನಿವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ತಿಂಗಳ ಕಾಲ ಉಪವಾಸ ವ್ರತ ಆಚರಿಸಿ, ಶ್ರದ್ಧಾ ಭಕ್ತಿಯಿಂದ ಮೈದಾನದಲ್ಲಿ ನೆರೆದಿದ್ದ ಸಾವಿರಾರು ಬಾಂಧವರು ವಿಶ್ವ ಶಾಂತಿ ಹಾಗೂ ಸೋದರತ್ವಕ್ಕಾಗಿ ಪ್ರಾರ್ಥಿಸಿದರು.
ಪರಸ್ಪರ ಅಪ್ಪಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಭಾವೈಕ್ಯತೆ ಮೆರೆಯಲಾಯಿತು. ಈ ಸಂದರ್ಭದಲ್ಲಿ ಜೇವರ್ಗಿ ಪಟ್ಟಣದ ಸಕಲ ಮುಸಲ್ಮಾನ ಬಾಂಧವರು ಹಾಗೂ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.
ಈ ಪವಿತ್ರ ಹಬ್ಬವು ಎಲ್ಲರ ಜೀವನದಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ತರಲಿ ಎಂದು ಆಶಿಸುತ್ತೇನೆ ಎಂದು ಹೇಳುವ ಮೂಲಕ ಡಾ. ಅಜಯಸಿಂಗ್ ಎಲ್ಲರಿಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯ ಕೋರಿದರು.